Mysore
18
clear sky

Social Media

ಮಂಗಳವಾರ, 20 ಜನವರಿ 2026
Light
Dark

ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.

ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್‌ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ.

ದಾರಿಯಲ್ಲಿ ಹೋಗುತ್ತಿದ್ದ ಕಾರನ್ನು ಕಂಡ ಕೂಡಲೇ ತೋಟದೊಳಗೆ ನುಗ್ಗಿದ ಚಿರತೆ, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾರನ್ನೇ ದಿಟ್ಟಿಸಿ ನೋಡುತ್ತಾ ನಿಂತಿದೆ.

ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನು ಇದೇ ಗ್ರಾಮದಲ್ಲಿ ಕಳೆದ ಐದು ದಿನಗಳ ಹಿಂದೆ ಹುಲಿಯೊಂದು ರೈತನ ಮುಂದೆಯೇ ಹಸುವನ್ನು ಎಳೆದೊಯ್ದು ತಿಂದುಹಾಕಿತ್ತು. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹಸು ಸಾವಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿ, ಬೋನು ಅಳವಡಿಸುವ ಭರವಸೆ ನೀಡಿದ್ದರು.

ಈಗ ಹುಲಿ ದಾಳಿಯಿಂದ ಆತಂಕಗೊಂಡಿದ್ದ ರೈತರಿಗೆ ಚಿರತೆ ಭಯವೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಚಿರತೆ ಹಾಗೂ ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿಯಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Tags:
error: Content is protected !!