ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ.
ಇತ್ತೀಚೆಗೆ ಚಿರತೆಯೊಂದು ರೈತರ ೨ ಹಸುಗಳು ಮತ್ತು ಮೇಕೆಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಇದರಿಂದ ಭಯಭೀತರಾದ ಸ್ಥಳೀಯರು ಅರಣ್ಯ ಇಲಾಖೆಗೆ ಬೋನು ಇರಿಸಿ ಚಿರತೆ ಸೆರೆಹಿಡಿಯಬೇಕು ಎಂದು ಮನವಿ ಮಾಡಿದ್ದರು.
ಇದನ್ನು ಓದಿ: ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ
ಭಾನುವಾರ ಬೆಳಿಗ್ಗೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೋನಿಗೆ ಬಿದ್ದ ಚಿರತೆಯನ್ನು ಮೈಸೂರು ಅರಣ್ಯ ಕಚೇರಿಗೆ ಸಾಗಿಸಿದರು. ನಂತರ ಚಿರತೆಯನ್ನು ದೂರದ ಬಿ.ಆರ್.ಹಿಲ್ಸ್ ಅರಣ್ಯಕ್ಕೆ ಬಿಡಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಆರ್.ಎಫ್.ಒ. ಸಂತೋಷ್ ಹೂಗಾರ್, ಡಿ.ವೈ.ಆರ್.ಎಫ್.ಒ. ಸಚಿನ್, ಬೀಟ್ ಫಾರೆಸ್ಟರ್ ರಾಜೇಗೌಡ, ನಿತೀಶ್ ನಾಯ್ಕ್, ಸಿಬ್ಬಂದಿ ಅಭಿ ಹಾಜರಿದ್ದರು.
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…