Mysore
22
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಟ್ಟು ತನಿಖೆಗೆ ಒಳಗಾಗಲಿ: ಪ್ರತಾಪ್‌ ಸಿಂಹ ಆಗ್ರಹ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಅವರು, ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ ಎಂದು ಬರೆದುಕೊಂಡಿದ್ದಾರೆ.

 

Tags:
error: Content is protected !!