ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಹಿಂದೆ ನನಗೆ ಅವಕಾಶ ಸಿಕ್ಕರೆ 2028ಕ್ಕೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಈಗ ಡಿ.ಕೆ. ಶಿವಕುಮಾರ್ ಅವರೇ, ನಾನೇ ಮುಂದೆಯೂ ಸಿಎಂ ಎಂದು ಹೇಳುತ್ತಿದ್ದಾರೆ. ಇದರಿಂದ ನನಗೆ ಸಂತೋಷವಾಗಿದೆ. 2028ಕ್ಕೂ ಅವರೇ ಸಿಎಂ ಆಗಲಿ, ಅವರಿಂದಲೇ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ತಿಳಿಸಿದ್ದಾರೆ.
ನನಗೆ ಇನ್ನೂ ವಯಸ್ಸಿದೆ, ಕಾಯುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆಯೂ ಮಾತನಾಡಿದ ಅವರು, ಸರ್ಕಾರ ದಿವಾಳಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆರ್ಥಿಕ ಇಲಾಖೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಹೇಳಿಲ್ಲ. ಬಜೆಟ್‌ನಲ್ಲಿ ಏನು ಘೋಷಣೆ ಮಾಡಿದ್ದೇವೆಯೋ, ಅಷ್ಟಕ್ಕೆ ಮಾತ್ರ ನಮ್ಮ ಬಳಿ ಹಣ ಇದೆ. ಹೊಸ ಘೋಷಣೆಗಳಿಗೆ ಹಣ ಹೊಂದಿಸುವುದು ಕಷ್ಟ ಎಂದು ಆರ್ಥಿಕ ಇಲಾಖೆ ಹೇಳಿದೆ ಎಂದಿದ್ದಾರೆ.
ಇಂತಹ ಸಲಹೆಯನ್ನು ಎಲ್ಲಾ ಸರ್ಕಾರಗಳಿಗೂ ಆರ್ಥಿಕ ಇಲಾಖೆ ನೀಡುತ್ತದೆ. ಹೊಸ ಘೋಷಣೆಗಳನ್ನು ಮಾಡುವಾಗ ಯೋಚನೆ ಮಾಡಿ ಘೋಷಿಸಿ ಎಂದು ಇಲಾಖೆ ಸೂಚಿಸಿದೆ. ಅದನ್ನು ನಾವು ಗಮನದಲ್ಲಿಟ್ಟುಕೊಂಡು ಮುಂದುವರಿಯುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…