ಮೈಸೂರು

ಶಿಕ್ಷಕರ ನೇಮಕಾತಿ ಸಿಬಿಐ, ಇಡಿ ತನಿಖೆಯಾಗಲಿ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್ ಲಿ   ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ರಾಹುಲ್‍ಗಾಂಧಿಗೆ ಅಕ್ರಮದ ವರದಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಅಕ್ರಮವೆಸಗಿದ್ದರೆ ಇದುವರೆಗೆ ಯಾಕೆ ತನಿಖೆ ಮಾಡಿಸಲಿಲ್ಲ? ರಾಹುಲ್ ಗಾಂಧಿಗೆ ಕಳುಹಿಸುವ ಉದ್ದೇಶವಾದರೂ ಏನು? ಕೇಂದ್ರ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಕೂಡಲೇ ತನಿಖೆ ನಡೆಸಿ ಸತ್ಯ ಹೊರಬರಲಿ ಎಂದು ಸವಾಲು ಹಾಕಿದರು.

ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ರಾಹುಲ್‍ಗಾಂಧಿ ಬೇಲ್ ಮೇಲಿದ್ದಾರೆ ಎನ್ನುವವರು ಜೈಲಿಗೆ ಹೋಗಿ ಬಂದವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡುತ್ತಾರೆ. ಅವರ ಮಗನಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುತ್ತಾರೆ. ಇಂತಹವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

andolana

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

4 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

5 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

5 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

6 hours ago