ಮೈಸೂರು

ಬಂಜಾರ ಸಮುದಾಯ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ; ಶಾಸಕ ಹರೀಶ್‌ ಗೌಡ ಸಲಹೆ

ಮೈಸೂರು:  ಒಗಟ್ಟಿನಿಂದ ಬಂಜಾರಾ ಸಮುದಾಯಗಳು ಕಾರ್ಯನಿರ್ವಹಿಸಬೇಕು, ಎಲ್ಲರೂ ಒಗ್ಗಟ್ಟಿನಿಂದ ಒಂದೇ ವೇದಿಕೆಯಲ್ಲಿ ಕೆಲಸ ಮಾಡುವಂತೆ ಆಗಬೇಕು. ನಾವು ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರಲ್ಲಿ ಸಫಲರಾಗುತ್ತೇವೆ ಅದರಿಂದ ಎಲ್ಲರನ್ನೂ ಒಗ್ಗೂಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಕೆ ಹರೀಶ್ ಗೌಡ  ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು  ಮಾತನಾಡಿದರು.

ಬಂಜಾರ ಸಮುದಾಯ ಎಂಬುದು ಕರ್ನಾಟಕ ರಾಜ್ಯದಲ್ಲಿ ಒಂದು ಚಿಕ್ಕ ಸಮುದಾಯ ಅದರಲ್ಲಿ ಉತ್ತರ ಕರ್ನಾಟಕದಲ್ಲಿ ಹೆಚ್ಚು ಜನಸಂಖ್ಯೆ ಇರುವಂತಹ ಸಮುದಾಯ ಮೈಸೂರಿನ ಭಾಗಗಳಲ್ಲಿ ಏಳರಿಂದ ಎಂಟು ಸಾವಿರ ಜನಸಂಖ್ಯೆ ಮಾತ್ರ ಇದೆ ಎಂದು ಹೇಳಿದರು.

ನಮ್ಮ ಚಾಮರಾಜ ಕ್ಷೇತ್ರದಲ್ಲಿ ಬಂಜಾರ ಸಮುದಾಯದ ವರಿಗೆ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಿದ್ದೇವೆ. ಬಂಜಾರ ಸಮುದಾಯ ಕೇಳುವಂತಹ ಮೂಲಭೂತ ಸೌಕರ್ಯಗಳನ್ನು ನಾನು ಒದಗಿಸುತ್ತೇನೆ ಎಂಬ ಭರವಸೆಯನ್ನು ನೀಡಿದರು.

ಲಂಬಾಣಿ ಸಮುದಾಯ ಕರ್ನಾಟಕಕ್ಕಿಂತ ಹೆಚ್ಚಾಗಿ ಉತ್ತರ ಕರ್ನಾಟಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಅದರಲ್ಲಿಯೂ ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿರುವುದನ್ನು ನಾವು ಕಾಣಬಹುದಾಗಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಲಂಬಾಣಿ ಸಮುದಾಯಗಳಿಗೆ ಸ್ಥಾನಮಾನ ನೀಡಬೇಕು ಎಂಬ ದೃಷ್ಟಿಯಿಂದ ಬಂಜಾರದ ಸಮುದಾಯಗಳಿಗೆ ಉಪ ನಿರ್ದೇಶಕರನ್ನು ನೇಮಕ ಮಾಡಿದ್ದಾರೆ. ಜೊತೆಗೆ ಬಂಜಾರ ಸಮುದಾಯದ ಪ್ರಾಧಿಕಾರವನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಅವುಗಳನ್ನೆಲ್ಲ ಮೇಲೆತ್ತುವಂತಹ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದೆ. ನಾನು ಸಹ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವಂತಹ ಲಂಬಾಣಿ ಸಮುದಾಯಗಳ ಅಭಿವೃದ್ಧಿ ಪೂರಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಮೈಸೂರು ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಹಳ ಸಂಭ್ರಮಯುತವಾಗಿ ಆಚರಣೆಗಳು ನಡೆಯುತ್ತಾ ಬರುತ್ತ ಇರುವುದು ಬಹಳ ಸಂತೋಷಕರವಾದಂತಹ ವಿಷಯ ಎಂದರು.

ವಿಧಾನ ಪರಿಷತ್ ನ ಶಾಸಕರಾದ ಸಿ. ಎನ್. ಮಂಜೇಗೌಡ ಮಾತನಾಡಿ ಮನುಷ್ಯ ಏನಾದರೂ ಕಲಿಯಬೇಕು ಎಂದರೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು, ಯಾರೂ ಸಹ ಸರ್ವಜ್ಞರಲ್ಲ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಿಸುವುದರಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಹೇಳಿದರು.

280 ವರ್ಷಗಳ ಹಿಂದೆ ಸಂತ ಸೇವಾಲಾಲ್ ರವರು ಮಾಡಿರುವಂತಹ ಕೆಲಸಗಳು ಅಪಾರವಾದದ್ದು ಅವುಗಳನ್ನು ಪ್ರಚಾರ ಮಾಡಲು ಯಾವುದೇ ಮಾಧ್ಯಮಗಳು ಇರಲಿಲ್ಲ ಹಾಗೂ ಅವರ ಪುಸ್ತಕಗಳನ್ನು ಪ್ರಚಾರ ಮಾಡಲು ಯಾರು ಇರಲಿಲ್ಲ ಅಂತಹ ಕಾಲದಲ್ಲಿಯೇ ಸಂತ ಸೇವಾಲಾಲ್ ಅವರು ಎಷ್ಟೋ ಜನರ ಮನಸ್ಸುಗಳನ್ನು ಗೆದ್ದಿದ್ದಾರೆ ಎಂದರೆ ಅವರು ಮಾಡಿದಂತಹ ಕೆಲಸ ಸಮಾಜಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.

ಯಾವುದೇ ಒಂದು ಸಮಾಜ ರಾಜಕೀಯವಾಗಿ ಧಾರ್ಮಿಕವಾಗಿ ಶಕ್ತಿಯುತವಾಗಿ ಬೆಳೆಯಬೇಕೆಂದರೆ ನಮ್ಮಲ್ಲಿ ಒಗ್ಗಟ್ಟಿನ ಜೊತೆಗೆ ಶಕ್ತಿ ಹಾಗೂ ಬುದ್ಧಿವಂತಿಕೆ ಇರಬೇಕು ಎಂದರು.

ಈ ಲಂಬಾಣಿ ಸಮುದಾಯದಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ಕೊಟ್ಟಿರುವುದು ಬಹಳ ಸಂತೋಷವಾಗಿದೆ. ಮಹಿಳೆಯನ್ನು ಗೌರವಿಸಿದರೆ ನೂರು ದೇವರುಗಳನ್ನು ಪೂಜೆ ಮಾಡಿದ ಹಾಗೆ ಎಂಬ ಮಾತು ಸತ್ಯವಾದದ್ದು ಎಂದು ತಿಳಿಸಿದರು.

ಪ್ರತಿಯೊಂದು ಸಮಾಜವು ಮುಂದೆ ಬರಬೇಕು, ಬಲಿಷ್ಠವಾಗಿ ಬೆಳೆಯಬೇಕು, ನಾವು ಏನೇ ಮಾಡಬೇಕಾದರೂ ಆದರ್ಶ ವಾದಂತಹ ಮಾತುಗಳನ್ನು ಹಾಡಬೇಕು, ನುಡಿಗಳನ್ನು ನುಡಿಯಬೇಕು, ಆದರ್ಶ ನುಡಿಗಳನ್ನು ನುಡಿಯಬೇಕಾದರೆ ಆದರ್ಶ ವ್ಯಕ್ತಿಯಾಗಿ ಬೆಳೆಯಬೇಕು ಎಂದು ಹೇಳಿದರು.

ಪ್ರತಿಯೊಬ್ಬ ಸಾಧಕರು ನಮಗೆ ಕೊಟ್ಟಿರುವಂತಹ ನುಡಿಮುತ್ತುಗಳನ್ನು, ಭಾವನೆಗಳನ್ನು ಸ್ವೀಕರಿಸಬೇಕು. ಸಂತ ಸೇವಾಲಾಲ್ ಪುಸ್ತಕಗಳನ್ನು ಓದಬೇಕು. ಸಂತ ಸೇವಾಲಾಲ್ ಆಗದಿದ್ದರೂ ಪರವಾಗಿಲ್ಲ ನಿಮ್ಮಲ್ಲಿ ಒಬ್ಬನಾದರೂ ಸಂತ ಸೇವಾಲಾಲ್ ಅವರ ರೀತಿ ಬೆಳೆಯಬೇಕು ಎಂದು ಹೇಳಿದರು.

ಕಲಬುರಗಿ ಜಿಲ್ಲೆಯ ಅಬಕಾರಿ ಅಧೀಕ್ಷಕರಾದ ಶ್ರೀ ರಾಮ್ ದೇವಸೋಥ್ ಅವರು ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಜಂಟಿ ನಿರ್ದೇಶಕರಾದ ವಿ .ಎನ್ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ ಸುದರ್ಶನ್, ಬಂಜಾರಾ ಸೇವಾ ಸಂಘದ ಅಧ್ಯಕ್ಷರಾದ ಎಂ.ಸುಂದರ್ , ಉಪಾಧ್ಯಕ್ಷ ತೇಜಾನಾಯಕ್, ಕಾರ್ಯದರ್ಶಿ ಎಂ. ಅನಿಲ್ , ಬಂಜಾರ ಸಮುದಾಯದ ಖಜಾಂಚಿ ಕಾವೇರಿ ಬಾಯಿ, ಬಂಜಾರ ಮಹಿಳಾ ಸಂಘದ ಅಧ್ಯಕ್ಷರಾದ ಧರಣಿಭಾಯಿ ಸುದರ್ಶನ್ ಹಾಗೂ ಮತ್ತಿತರ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago