ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವರ ಗಮನಕ್ಕೂ ತಂದಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಕಳುಹಿಸಲಿ ಎಂದು ಹೇಳಿದರು.
ಕೇಂದ್ರದ ತಂಡ ಯಾಕೆ ಬರುತ್ತಿಲ್ಲ ಅಂತ ಬಿಜೆಪಿಯವರು ಹೇಳಲಿ. ಸುಮ್ಮನೆ ಕರ್ನಾಟಕದ ಬಿಜೆಪಿ ನಾಯಕರು ಹಾದಿಬೀದಿಯಲ್ಲಿ ಹೋರಾಟಮಾಡುವ ಬದಲಿಗೆ ಕೇಂದ್ರದಿಂದ ತಜ್ಞರ ತಂಡ ಕರೆಸುವಂತೆ ಮಾಡಲಿ ಎಂದು ಕಿಡಿಕಾರಿದರು. ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯಗಳು ಕುಳಿತು ಮಾತುಕತೆಗೆ ಈಗಲೂ ನಾವು ಸಿದ್ದವಿದ್ದೇವೆ ಎಂದರು. ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಎಐಎಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ? ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು.ಸುಮ್ಮನೆ ಬಿ ಟೀಮ್,ಬಿ ಟೀಮ್ ಎನ್ನಬಾರದು ಎಂದು ತಿರುಗೇಟುನೀಡಿದರು.
ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ.ಈಗ ಅವರು ಚಡ್ಡಿ ಚಳುವಳಿ ಮಾಡ್ತಾ ಇದ್ದಾರೆ.ಚಳುವಳಿ ಮಾಡಲಿ ಎಂದು ಟೀಕಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…