ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹೆದ್ದಾರಿಗಳಲ್ಲಿ ನಿಗದಿಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಕಂಡು ಬಂದರೆ ಅಂತಹ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಿಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 1 ರಿಂದ ಈ ನಿಯಮ ಜಾರಿ ಬರಲಿದೆ. ಶೇ.90 ರಷ್ಟು ಮಾರಣಾಂತಿಕ ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ನಡೆಸಿದಾಗ ಗುರುವಾರ(ಜು.25) ಒಂದೇ ದಿನ 155 ಮಂದಿ ಚಾಲಕರು 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಇದರಿಂದ ಸಾವು-ನೋವುಗಳ ಸಂಖ್ಯೆ ಅಧಿಕವಾಗುತ್ತಿವೆ ಎಂದಿದ್ದಾರೆ.
ಇನ್ನೂ ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ಬಗ್ಗೆ ಮಾಹಿತಿ ನೀಡಿರುವ ಅವರು, ಓವರ್ ಸ್ಪೀಡಿಂಗ್‌ನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್ ಎಂದು ಅಳೆಯಲಾಗುತ್ತದೆ. ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದೂ ಕೇಸ್ ಬುಕ್ ಆಗುತ್ತದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…