ಮೈಸೂರು

ನಮ್ಮ ಪರಂಪರೆ, ನಮ್ಮ ಪ್ರಕೃತಿ, ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳಸೋಣ, ಶ್ರೇಷ್ಠ ಭಾರತವನ್ನ ಕಟ್ಟೋಣ : ಯದುವೀರ್ ಕರೆ

ಮೈಸೂರು :  ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತನೀಡುವ ಮೂಲಕ ಅದು ಪರಿವರ್ತನೆ ಯಾಗಲಿ ಎಂದು
ಯದುವೀರ್‌ ಹೇಳಿದರು.

ಅಗ್ರಹಾರದ 101 ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ರೋಸ್ ಶೋ‌ನಲ್ಲಿ ಮಾತನಾಡಿದ ಅವರು,  ನಮ್ಮೆಲ್ಲರ ಪ್ರದಾನ ಮಂತ್ರಿಗಳು ಭಾರತದ ಸರ್ವತೋಮುಖ ಅಭಿವೃದ್ಧಿಗಾಗಿ ಏನೆಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ನಿಮಗೆಲ್ಲ ತಿಳಿದಿರುವ ವಿಚಾರ, ಅವರು ಸಮಾಜದ ಒಳಿತಿಗಾಗಿ ಪಾರಂಪರೆಯ ರಕ್ಷಣೆಗಾಗಿ ಅನೇಕ ಕೆಲಸಗಳನ್ನು ಮಾಡಿದ್ದಾರೆ.

ಅವರ ಕೈ ಬಲ ಪಡಿಸುವ ಮೂಲಕ ಭಾರತ ಹಾಗೆಯೇ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡೋಣ , ನಮ್ಮ ಪರಂಪರೆ, ಪ್ರಕೃತಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸೋಣ  ಎಂದರು.

ನಿಮ್ಮೆಲ್ಲರ ಪ್ರೀತಿ ಸಹಕಾರ ಸದಾ ಹೀಗೆ ಇರಲಿ, ಕಮಲದ ಗುರುತಿಗೆ ನನ್ನ ಕ್ರಮ ಸಂಖ್ಯೆ 01 ಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತ ನೀಡಬೇಕು ಎಂದು ಮನವಿ ಮಾಡಿದರು.

ಇದೆ ಸಂಧರ್ಭದಲ್ಲಿ ಶಾಸಕ ಶ್ರೀವತ್ಸಾ, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸೌಮ್ಯ ಉಮೇಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು .

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 hour ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 hour ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 hour ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 hour ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

2 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

2 hours ago