ಮೈಸೂರು

ಅಕ್ರಮ ರೇಸಾರ್ಟ್‌ಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಪತ್ರ

ಎಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.

ಕನಕಪುರ ಸಮೀಪದಲ್ಲಿರುವ ಗಾಳಿಬೋರೆ ರೆಸಾರ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿ, ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳ ಜಾರಿ ಬಗ್ಗೆ ಅಧಿಕಾರಿಗಳೊಡನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕಬಿನಿ ಹಾಗೂ ನುಗು ಜಲಾಶಯಗಳ ಹಿನ್ನೀರಿನಲ್ಲಿ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರು, ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕೆಲವೊಂದು ವಿದ್ಯುನ್ಮಾನ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಆರೋಪಿಸಲಾಗಿದೆ.

ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್‌ಗಳ ನಿರ್ಮಾಣದ ಬಗ್ಗೆ ನನಗೆ ಯಾವುದೇ ಲಿಖಿತ ದೂರುಗಳು ಬಂದಿಲ್ಲ. ಆದ್ದರಿಂದ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿನ ಅಂಶಗಳನ್ನು ದೂರುಗಳೆಂದು ಆಧರಿಸಿ ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ವಾಗುತ್ತಿದ್ದಲ್ಲಿ ಅಥವಾ ಕಾರ್ಯನಿರ್ವಹಿಸುತ್ತಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಪತ್ರ ಬರೆದು ಸೂಚಿಸಿದ್ದೇನೆ ಎಂದರು.

ತಾಲ್ಲೂಕಿನಲ್ಲಿ ಯಾವುದೇ ತಪ್ಪು ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ತಾಲ್ಲೂಕನ್ನು ಅಭಿವೃದ್ಧಿಪಡಿಸಿ ಜನಸಾಮಾನ್ಯರ ಕಷ್ಟ, ನೋವುಗಳಿಗೆ ಸ್ಪಂದಿಸುವುದೇ ನನ್ನ ಪ್ರಮುಖ ಉದ್ದೇಶವಾಗಿದೆ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಪಿತೂರಿ ನಡೆಸಿದರೆ ಅದನ್ನು ಎದುರಿಸುವ ಶಕ್ತಿಯನ್ನು ಕ್ಷೇತ್ರದ ಜನತೆ ನನಗೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿರುವ ಜಂಗಲ್ ರೆಸಾರ್ಟ್‌ಗಳ ಮತ್ತಷ್ಟು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ೨೬ ಜಂಗಲ್ ರೆಸಾರ್ಟ್‌ಗಳಿಗೂ ಭೇಟಿ ನೀಡುತ್ತಿದ್ದೇನೆ. ಅಲ್ಲಿನ ಅಧಿಕಾರಿಗಳ ಮತ್ತು ನೌಕರರು ಸಿಬ್ಬಂದಿಗಳೊಡನೆ ಚರ್ಚಿಸಿ ಅಭಿವೃದ್ಧಿಪಡಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಜಂಗಲ್ ರೆಸಾರ್ಟ್‌ನ ಉನ್ನತ ಮಟ್ಟದ ಅಽಕಾರಿಗಳಾದ ಅನುಷಾ, ಭಕ್ತಪ್ರಸಾದ್, ಯುವರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ್, ಶಿವಣ್ಣ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

29 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

43 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

1 hour ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago