ಮೈಸೂರು

ಬೆಂಗಳೂರು ನಗರದಂತೆ ಮೈಸೂರಿಗೂ ರೈಲ್ವೆ ಸೌಲಭ್ಯ: ರೈಲ್ವೆ ಸಚಿವ ಸೋಮಣ್ಣ

ವಿಕಾಸದ ಇಂಜಿನ್ ರೈಲ್ವೆ ಇಲಾಖೆ – ವಿ.ಸೋಮಣ್ಣ

ಮೈಸೂರು : ಕರ್ನಾಟಕದಲ್ಲಿ ಅತಿ ಹೆಚ್ಚು ರೈಲ್ವೆ ಸೌಲಭ್ಯಗಳನ್ನು ಹೊಂದಿರುವ ಬೆಂಗಳೂರು ನಗರದಂತೆಯೇ ಇನ್ನು ಮುಂದೆ ಮೈಸೂರು ನಗರಕ್ಕೂ ಎಲ್ಲಾ ರೀತಿಯ ರೈಲ್ವೆ ಸೌಲಭ್ಯಗಳು ದೊರಕಲಿದೆ ಎಂದು ರೈಲ್ವೆ ರಾಜ್ಯ ಸಚಿವರು ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಭರವಸೆ ನೀಡಿದರು.

ಇಂದು ಮೈಸೂರು ವಿಭಾಗೀಯ ರೈಲ್ವೆ ನಿರ್ವಹಣಾ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿ ಹೆಚ್ಚು ಜವಾಬ್ದಾರಿಯನ್ನು ಹೊಂದಿರುವ ರೈಲ್ವೆ ಇಲಾಖೆಯು ರಾಷ್ಟ್ರದ ವಿಕಾಸದ ಎಂಜಿನ್ ನಂತೆ ಕಾರ್ಯನಿರ್ವಹಿಸುತ್ತದೆ. ಹೊರ ರಾಷ್ಟ್ರದವರು ವಿಕಸಿತ ಭಾರತದ ರೈಲ್ವೆ ಇಲಾಖೆಯ ಅಭಿವೃದ್ಧಿಯ ಬಗ್ಗೆ ಮಾತನಾಡುವಂತೆ ಮಾಡಬೇಕು ಎಂದರು.

ಪ್ರತಿ ವರ್ಷವು 124 ಕಿ.ಮೀ ರೈಲ್ವೆ ಲೈನ್ಸ್ ಗಳು ಹೆಚ್ಚಾಳವಾಗುತ್ತಿದೆ. 333 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದ 15 ರೈಲ್ವೆ ಸ್ಟೇಷನ್‌ಗಳನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದ್ದು, 2025 ಕ್ಕೆ ಈ ಯೋಜನೆಯು ಪೂರ್ಣಗೊಳ್ಳಲಿದೆ. ಪ್ರಸ್ತುತ ಮೈಸೂರಿನಲ್ಲಿ 80 ರೈಲುಗಳ ಸಂಚಾರವಿದ್ದು, ಮುಂಬರುವ ದಿನಗಳಲ್ಲಿ ಸಂಖ್ಯೆಯನ್ನು ಹೆಚ್ಚಿಸುವ ಚಿಂತನೆಯಿದೆ ಎಂದು ಮಾಹಿತಿ ನೀಡಿದರು.

ಮೈಸೂರು-ಕುಶಾಲನಗರ ನಡುವೆ 89 ಕಿ.ಮೀ ರೈಲು ಮಾರ್ಗ ನಿರ್ಮಾಣ ಹಾಗೂ ಚಾಮರಾಜನಗರದಲ್ಲಿ ಸುಮಾರು 142 ಕಿ.ಮೀ ನ ಹೊಸ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಸ್ಥಳೀಯ ಜನರಿಗೆ ಹಾಗೂ ಪ್ರಯಾಣಿಕರಿಗೆ ಸಹಾಯವಾಗುತ್ತದೆ. ಅಲ್ಲದೆ ಹಲವಾರು ಪ್ರದೇಶಗಳಿಗೆ ರೈಲಿನ ಸೌಲಭ್ಯ ಸಿಕ್ಕಂತಾಗುತ್ತದೆ ಎಂದರು.

ಬಡವರು ಮತ್ತು ಜನಸಾಮಾನ್ಯರಿಗೆ ಸಹಾಯವಾಗುವಂತೆ ತುಮಕೂರು,ಮಂಡ್ಯ,ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಮೆಮೊ ರೈಲುಗಳನ್ನು ತರಲಾಗಿದ್ದು, ಇದೇ ತಿಂಗಳ 27 ನೇ ತಾರೀಕಿನಂದು ಉದ್ಘಾಟನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸರ್ಕ್ಯುಲರ್ ರೈಲು ಯೋಜನೆಯಲ್ಲಿ ಮೈಸೂರು ಜಿಲ್ಲೆಯು ಒಳಪಟ್ಟಿದ್ದು, ಇದರಿಂದ ಬೆಂಗಳೂರು ಹಾಗೂ ಮೈಸೂರಿಗೆ ಮತ್ತು ಮೆಟ್ರೋಗೆ ನೇರ ಸಂಪರ್ಕವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸರಕು ಸಾಗಾಣಿಕೆಗೆ ಆದ್ಯತೆ ನೀಡಲಾಗಿದ್ದು, ಸಾರ್ವಜನಿಕರ ಸಂಚಾರಕ್ಕೂ ಅನುವು ಮಾಡಿಕೊಡಲಾಗುವುದು ಎಂದರು.

ರೈಲುಗಳಲ್ಲಿ ಮಹಿಳಾ ಭೋಗಿಗಳನ್ನು ಹೆಚ್ಚಿಸುವ ಸಂಬoಧ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ರೈಲುಗಳಿಗೆ ಅಳವಡಿಸುವ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಇದರ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಹಾಗೂ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

39 mins ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

3 hours ago

ಉದ್ಘಾಟನೆಯಾಗದ ಅಂಬಾರಿ ಖ್ಯಾತಿಯ ಅರ್ಜುನನ ಸ್ಮಾರಕ

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…

3 hours ago

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

3 hours ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

3 hours ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

14 hours ago