ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ಯಾವಾಗಲೂ ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಪಾದಯಾತ್ರೆಗಳು ನಡೆಯುವುದು ಸಾಮಾನ್ಯ. ಜನರ ಕಷ್ಟಕ್ಕೆ ಯಾವ ಸಮಯದಲ್ಲಿ ಕೆಲಸ ಮಾಡಿದ್ದಾರೆ ಎಂಬುದನ್ನು ಜನರು ನೋಡಿದ್ದಾರೆ. ನಾಲ್ಕೂ ವರ್ಷಗಳಿಂದ ಅವರಿಗೆ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ. ಈಗ ಜನರು ಸಮಸ್ಯೆ ಎದುರಿಸುತ್ತಿದ್ದಾರೆಂದು ಯಾತ್ರೆ ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಜಾ.ದಳ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಶಾಸಕರಲ್ಲಿ ಯಾರೂ ವಾಪಸ್ ಹೋಗುವುದಿಲ್ಲ. ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಕೂಡ ಹೋಗುವುದಿಲ್ಲ ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ ಎಂದು ಹೇಳಿದರು.
ಬಹುವಚನ ಕಲಿತಿಲ್ಲ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲವನ್ನೂ ಕಲಿತಿದ್ದಾರೆ. ಆದರೆ, ಬಹುವಚನ ಬಳಸುವುದನ್ನು ಮಾತ್ರ ಕಲಿಯಲಿಲ್ಲ. ಹಿರಿಯರಾದ ಅವರು ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಕ್ಕೆ ನನಗೇನೂ ಬೇಜಾರಿಲ್ಲ. ಅವರು ಹಾಗೆ ಮಾತನಾಡುವುದರಲ್ಲಿ ವಿಶೇಷ ಏನಿಲ್ಲ. ಒಂದು ರೀತಿಯಲ್ಲಿ ನಾನು ನ್ಯೂಕ್ಲಿಯರ್ ಇದ್ದಂತೆ. ಕೆಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ನಾನು ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಟಾರ್ಗೆಟ್ ಮಾಡಿಕೊಂಡು ಮಾತನಾಡುತ್ತಿದ್ದಾರೆ ಎಂದರು.
ಓಮೈಕ್ರಾನ್ ತಳಿ ಪತ್ತೆ ಆಗಿಲ್ಲ: ಮಹಾರಾಷ್ಟ್ರದಲ್ಲಿ ಒಂದು ಓಮೈಕ್ರಾನ್ ಪ್ರಕರಣ ಪತ್ತೆಯಾಗಿದೆ. ಆದರೆ ಕರ್ನಾಟಕದಲ್ಲಿ ಆ ರೂಪಾಂತರಿ ತಳಿ ಪತ್ತೆ ಆಗಿಲ್ಲ, ಹೀಗಿದ್ದರೂ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡಿದ್ದೇವೆ.
ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಸಂದರ್ಭ ಬಂದಿಲ್ಲ.ಕೋವಿಡ್ ಲಸಿಕೆ ನೀಡುವಲ್ಲಿ 1 ನೇ ಹಾಗೂ 2ನೇ ಡೋಸ್ ಶೇ.100 ರಷ್ಟು ಗಡಿ ದಾಟಿದೆ. ಎಲ್ಲರೂ ಮೂರನೇ ಡೋಸ್ ಹಾಕಿಸಿಕೊಳ್ಳಬೇಕು.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…