ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆ ಆಗಲಿದ್ದು, ಅ.12ರಂದು ಜಂಬೂಸವಾರಿ ನಡೆಯಲಿದೆ.
ಇದೀಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 5 ಹೆಣ್ಣು ಆನೆ ಸೇರಿದಂತೆ 18 ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಪ್ರಥಮ ಹಂತದಲ್ಲಿ 9 ಹಾಗೂ 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ.
ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ್, ಗೋಪಿ, ಭೀಮ, ಲಕ್ಷ್ಮೀ, ಕಂಜನ್,ರೋಹಿತ್ ಹಾಗೂ ಏಕಲವ್ಯ, ಎರಡನೇ ಹಂತದಲ್ಲಿ ಮಹೇಂದ್ರ, ಗೋಪಿ, ಪ್ರಶಾಂತ, ಸುಗ್ರೀವ, ಹಿರಣ್ಯ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ.
ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ ಎರಡನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ.
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…