ಮೈಸೂರು

ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ ಪಟ್ಟಿ ಬಿಡುಗಡೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ 3 ರಂದು ದಸರಾ ಉದ್ಘಾಟನೆ ಆಗಲಿದ್ದು, ಅ.12ರಂದು ಜಂಬೂಸವಾರಿ ನಡೆಯಲಿದೆ.

ಇದೀಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 5 ಹೆಣ್ಣು ಆನೆ ಸೇರಿದಂತೆ 18 ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಪ್ರಥಮ ಹಂತದಲ್ಲಿ 9 ಹಾಗೂ 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ.

ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ್‌, ಗೋಪಿ, ಭೀಮ, ಲಕ್ಷ್ಮೀ, ಕಂಜನ್‌,ರೋಹಿತ್‌ ಹಾಗೂ ಏಕಲವ್ಯ, ಎರಡನೇ ಹಂತದಲ್ಲಿ ಮಹೇಂದ್ರ, ಗೋಪಿ, ಪ್ರಶಾಂತ, ಸುಗ್ರೀವ, ಹಿರಣ್ಯ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ.

ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ ಎರಡನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

17 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

18 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

23 hours ago