ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಗೌತಮ್ ಪದವೀಧರ ವಿದ್ಯಾರ್ಥಿ ನಿಲಯದಲ್ಲಿನ ಬೆಳಗಿನ ಉಪಹಾರದಲ್ಲಿ ಹಲ್ಲಿ ಪತ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯಕ್ಕೆ ಒಳಾಗುತ್ತಿದೆ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇಂದು ನಗರದ ಮಾನಸ ಗಂಗೋತ್ರಿಯ ವಿಶ್ವ ಮಾನವ ಆಕೃತಿ ಮುಂಭಾಗ ಗೌತಮ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಈ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಉಪಹಾರದಲ್ಲಿ ಹಲ್ಲಿ ಕಾಣಸಿಕೊಂಡಿದೆ. ಈ ವಿಷಯ ಗಮನಕ್ಕೆ ಬರುವ ಮೊದಲೇ ಸುಮಾರು 102 ಜನರು ಈ ಉಪಹಾರವನ್ನು ತಿಂದಿದ್ದಾರೆ. ಗಮನಕ್ಕೆ ಬಂದ ತಕ್ಷಣ ನಾವು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಹಾಸ್ಟೆಲ್ ವಾರ್ಡನ್ ಅವರಿಗೆ ಮಾಹಿತಿ ನೀಡಿದೆವು. ಯಾವುದೂ ಪ್ರಯೋಜನಕ್ಕೆ ಬಾರಲಿಲ್ಲ. ಕೇವಲ ಊಟದ ವಿಷಯವಷ್ಟೇ ಅಲ್ಲ, ಕೊಠಡಿಗಳು, ಕಿಚೆನ್ ಹಾಲ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳು ಸೇರಿದಂತೆ ಅನೇಕಾನೇಕ ಸಮಸ್ಯೆಗಳನ್ನು ಪ್ರತಿನಿತ್ಯ ನಾವು ಅನುಭವಿಸುತ್ತಿದ್ದೇವೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ ವಿದ್ಯಾರ್ಥಿಗಳು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…