Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಲೋಕಸಭಾ ಚುನಾವಣೆ ಹಿನ್ನಲೆ: ಮಸ್ಟರಿಂಗ್ ಕೇಂದ್ರಗಳ ಸ್ಥಾಪನೆ

ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಏ.26 ರಂದು ಮತದಾನ ನಡೆಯುವ ಸಂಬoಧ ಏ.25 ರಂದು ಜಿಲ್ಲೆಯ ಎಲ್ಲಾ ಮಸ್ಟರಿಂಗ್ ಕಾರ್ಯವನ್ನು ನಡೆಸಲು ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಪುಷ್ಪ ಆಂಗ್ಲ ಮಾಧ್ಯಮ ಶಾಲೆ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಹುಣಸೂರಿನ ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು, ಚಾಮರಾಜನಗರ ಲೋಕಸಭಾ ಕ್ಷೇತ್ರ ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ ಕೋಟೆಯ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ನಂಜನಗೂಡಿನ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಹಾರಾಣಿ ಮಹಿಳಾ ಕಲಾ ಕಾಲೇಜು, ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಮಹಾರಾಜ ಶತಮಾನೋತ್ಸವ ಭವನ ಶೈಕ್ಷಣಿಕ ಕಟ್ಟಡದ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಮೈಸೂರಿನ ಬೇಡನ್ ಪೋವೆಲ್ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಜಗದ್ಗುರು ಶ್ರೀ ಶಿವರಾತ್ರೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ವರುಣ ವಿಧಾನಸಭಾ ಕ್ಷೇತ್ರಕ್ಕೆ ನಂಜನಗೂಡಿನ ಜೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು, ಟಿ.ನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಟಿ.ನರಸೀಪುರದ ವಿದ್ಯೋದಯ ಪದವಿ ಪೂರ್ವ ಕಾಲೇಜುಗಳಲ್ಲಿ ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಯಾವುದೇ ಮತದಾನಾಧಿಕಾರಿಗಳು ಮಸ್ಟರಿಂಗ್ ಕೇಂದ್ರಕ್ಕೆ ತಡವಾಗಿ ಹಾಜರಾಗಬಾರದು. ಮತದಾನದ ಅಧಿಕಾರಿಗಳಾಗಿ ನೇಮಕ ಮಾಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಅಥವಾ ನೌಕರರು ತಮಗೆ ನಿಗದಿಪಡಿಸಿರುವ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಲ್ಲಿ ಬೆಳಿಗ್ಗೆ 8.30 ಗಂಟೆಯ ಒಳಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: