ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು ಸ್ವೀಕರಿಸಲಿದ್ದಾರೆ.
ಜುಲೈ 10 ರಂದು ಬೆಳಿಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸರ್ಕಾರಿ ಪ್ರವಾಸಿ ಮಂದಿರ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಾಲೂಕು ಕಚೇರಿ ಮತ್ತು ಜುಲೈ 12 ರಂದು ಮಡಿಕೇರಿ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿ ದೂರು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ದೂರು ನೀಡಿ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕ್ಷರಾದ ಸಜಿತ್ ವಿ.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…