ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಪೊಲೀಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು.
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಮನೆಯಲ್ಲಿ ಇದ್ದಂತಹ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇಂದು ಒಂದೇ ದಿನ ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ.