ಮೈಸೂರು

ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ ಮೇಲೆ ʻಲೋಕಾʼ ರೇಡ್

ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದು, ಪೊಲೀಸ್‌ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು.

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ  ಲೇಬರ್‌ ಇನ್ಸ್ ಪೆಕ್ಟರ್‌ ಚೇತನ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಮನೆಯಲ್ಲಿ ಇದ್ದಂತಹ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಇಂದು ಒಂದೇ ದಿನ ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್‌ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

11 mins ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

22 mins ago

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

57 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

1 hour ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

1 hour ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago