ಮೈಸೂರು

ಮೈಸೂರು | ಏಕಕಾಲಕ್ಕೆ ಎಂಟು ಕಡೆ ಲೋಕಾ ದಾಳಿ

ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಗಳಲ್ಲಿ ಆಸ್ತಿಗಳ ಇ-ಖಾತಾ ಪಡೆಯಲು ಮತ್ತು ಇತರ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಲು ಆಸ್ತಿ ಮಾಲೀಕರಿಂದ 40,000 ರೂ.ಗಳಿಂದ 1 ಲಕ್ಷ ರೂ.ಗಳವರೆಗೆ ಲಂಚ ಕೇಳಲಾಗುತ್ತಿದೆ ಎಂದು ಸಾಕಷ್ಟು ಸಾರ್ವಜನಿಕರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್ ನಿಡಿದ್ದಾರೆ. ನಗರದ 5 ವಲಯ ಕಚೇರಿಗಳು ಮತ್ತು 3 ಪಟ್ಟಣ ಪಂಚಾಯಿತಿಗಳ ಮೇಲೆ ದಾಳಿ ನಡೆಸಿದರು.

ನಗರಪಾಲಿಕೆಯ ವಲಯ ಕಚೇರಿಗಳ 2,3,7,8 ಮತ್ತು 9 ಹಾಗೂ ಶ್ರೀರಾಂಪುರ, ಬೋಗಾದಿ ಮತ್ತು ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ದಾಳಿ ನಡೆಸಲಾಯಿತು. ದಾಳಿಯ ಸಮಯದಲ್ಲಿ, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು, ಕಡತಗಳು, ರಿಜಿಸ್ಟರ್‌ಗಳು ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಇ-ಖಾತಾ ಮಾಡಿಕೊಡುವ ಸಂಬಂದ ಸರ್ವರ್ ಸಮಸ್ಯೆ ಇದೆ ಎಂಬ ಫಲಕಗಳನ್ನು ಕೆಲ ಕಚೇರಿಗಳ ಮುಂದೆ ಪ್ರದರ್ಶಿಸಲಾಗಿತ್ತು. ಇದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾ ಅಧಿಕಾರಿಗಳು ಇದು ಲಂಚಕ್ಕೆ ಬೇಡಿಕೆ ಇಡುವ ಉಪಾಯವೇ ಎಂದು ಪ್ರಶ್ನಿಸಿದರು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

32 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago