ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್ ನೀಡಿದ್ದಾರೆ.
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನೀವು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿ
ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ಮಾಡಲಾಗಿದೆ. ಆದರೆ ಈ ಪ್ರಕರಣ ಸಿವಿಲ್ ಸ್ವರೂಪದ್ದಾಗಿದ್ದು, ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ. ಅಲ್ಲದೇ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಕೂಡ ಇದೆ ಎಂದು ಹೇಳಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.





