ಮೈಸೂರು

ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ: ಸ್ನೇಹಮಯಿ ಕೃಷ್ಣಗೆ ನೋಟಿಸ್‌ ನೀಡಿದ ಲೋಕಾಯುಕ್ತ

ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್‌ ನೀಡಿದ್ದಾರೆ.

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ನೋಟಿಸ್‌ ಜಾರಿಗೊಳಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನೀವು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿ
ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ಮಾಡಲಾಗಿದೆ. ಆದರೆ ಈ ಪ್ರಕರಣ ಸಿವಿಲ್‌ ಸ್ವರೂಪದ್ದಾಗಿದ್ದು, ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ. ಅಲ್ಲದೇ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಕೂಡ ಇದೆ ಎಂದು ಹೇಳಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago