Mysore
19
overcast clouds
Light
Dark

ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ಗೆ ಬೆಂಬಲ ಘೋಷಿಸಿದ ಒಕ್ಕಲಿಗರ ಸಂಘ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೂಡಿದ್ದ ಒಕ್ಕಲಿಗ ಅಸ್ತ್ರ ಪ್ರಯೋಗ ಯಶಸ್ವಿಯಾಗಿದೆ. ಹೌದು. ಅದರಂತೆ ಇದೀಗ ಮೈಸೂರಿನ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ.

ಈ ಕುರಿತು ಇಂದು(ಏ.18) ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ ಏಪ್ರಿಲ್‌ 16ರಂದು ಜಿಲ್ಲಾ ಒಕ್ಕಲಿಗರ ಸಂಘ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವ ಒಕ್ಕಲಿಗ ಸಮುದಾಯ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರಿಗೆ ಬೆಂಬಲ ನೀಡಲು ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಪ್ರತಾಪ್‌ ಸಿಂಹ ಒಕ್ಕಲಿಗೆ ಎನ್ನುವ ಕಾರಣಕ್ಕೆ ಬಿಜೆಪಿ ಈ ಬಾರಿ ಟಿಕೆಟ್‌ ನೀಡದೆ ಒಕ್ಕಲಿಗ ವ್ಯಕ್ತಿಗೆ ಅನ್ಯಾಯ ಮಾಡಿದೆ. ಆದರೆ ಕಾಂಗ್ರೆಸ್‌ ಪಕ್ಷ ಒಕ್ಕಲಿಗರಾದ ಎಂ. ಲಕ್ಷ್ಮಣ್ ಅವರಿಗೆ ಟಿಕೆಟ್‌ ನೀಡಿದೆ. ಲಕ್ಷ್ಮಣ್ ಒಕ್ಕಲಿಗರಲ್ಲ ಎಂದು ಕೆಲವರು ಆರೋಪ‌ ಮಾಡಿದ್ರು. ಲಕ್ಷ್ಮಣ್ ಅವರು ಒಕ್ಕಲಿಗರು, ಅವರು ಒಕ್ಕಲಿಗರ ಸಂಘದಿಂದಲೂ ಸ್ಪರ್ಧೆ ಮಾಡಿದ್ದಾರೆ. ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ನಾವು ಯಾವುದೇ ಪಕ್ಷವನ್ನು ಬೆಂಬಲಿಸುತ್ತಿಲ್ಲ. ಲಕ್ಷ್ಮಣ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಬೆಂಬಲಿಸುತ್ತಿಲ್ಲ. ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.