Mysore
29
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಅರಸು ಕಲ್ಲಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಗುರುವಾರ ನಡೆದಿದೆ.

KA-21-C-6050 ನೊಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿ ಮತ್ತು KA-45-W-3499 ನೊಂದಣಿ ಸಂಖ್ಯೆಯ ಟಿವಿಎಸ್‌ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಸುರೇಶ (63) ಹಾಗೂ ಮಾದೇವ (52) ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬೈಕ್‌ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರುಕಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರವಿ, ಹುಣಸೂರು ಗ್ರಾಮಾಂತರ ಠಾಣೆಯ ಪಿಎಸ್ಐ ರಾಧಾ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!