Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳ ಸೇಡಿನ ರಾಜಕಾರಣ ಸಲ್ಲದು: ಎಂ.ಕೆ.ಸೋಮಶೇಖರ್‌

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರವರ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ಅವರ ಅಧಿಕಾರ ಅವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಜನಕಲ್ಯಾಣದ ಇತಿಹಾಸವನ್ನು ನಿರ್ಮಿಸಿದ್ದಾರೆಯೇ ಹೊರತು ತಮ್ಮ ಸ್ವಾರ್ಥದ ಕೆಲಸವನ್ನು ಮಾಡಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿದಷ್ಟು ಜನೋಪಕಾರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬೇರೆ ಯಾವ ಸರ್ಕಾರವೂ ನೀಡಿಲ್ಲ. ಅವರ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಶುದ್ಧ ಹಸ್ತರಾಗಿ ತಮ್ಮ ಆಡಳಿತವನ್ನು ಪ್ರಾಮಾಣಿಕವಾಗಿ ನಡೆಸುತ್ತಿದ್ದಾರೆ. ಆದರೆ ವಿರೋಧ ಪಕ್ಷಗಳು (ಬಿಜೆಪಿ-ಜೆಡಿಎಸ್‌) ಪ್ರತಿನಿತ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ತಿರುಗಿ ನೋಡುವಂತೆ ಆಡಳಿತ ನಡೆಸುತ್ತಿದ್ದಾರೆ. ಆದರೆ ವಿಪಕ್ಷಗಳು ಅವರನ್ನು ದೂಷಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ದಕ್ಷ, ಪ್ರಾಮಾಣಿಕ ರಾಜಕಾರಣಕ್ಕೆ ಬೆಂಬಲ ನೀಡಲು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಅಧಿಕ ಜನ ಸ್ವಾಭಿಮಾನಿ ಸಮಾವೇಶದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

 

 

Tags: