ಮೈಸೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳ ಸೇಡಿನ ರಾಜಕಾರಣ ಸಲ್ಲದು: ಎಂ.ಕೆ.ಸೋಮಶೇಖರ್‌

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರವರ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ಅವರ ಅಧಿಕಾರ ಅವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಜನಕಲ್ಯಾಣದ ಇತಿಹಾಸವನ್ನು ನಿರ್ಮಿಸಿದ್ದಾರೆಯೇ ಹೊರತು ತಮ್ಮ ಸ್ವಾರ್ಥದ ಕೆಲಸವನ್ನು ಮಾಡಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿದಷ್ಟು ಜನೋಪಕಾರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬೇರೆ ಯಾವ ಸರ್ಕಾರವೂ ನೀಡಿಲ್ಲ. ಅವರ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಶುದ್ಧ ಹಸ್ತರಾಗಿ ತಮ್ಮ ಆಡಳಿತವನ್ನು ಪ್ರಾಮಾಣಿಕವಾಗಿ ನಡೆಸುತ್ತಿದ್ದಾರೆ. ಆದರೆ ವಿರೋಧ ಪಕ್ಷಗಳು (ಬಿಜೆಪಿ-ಜೆಡಿಎಸ್‌) ಪ್ರತಿನಿತ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ತಿರುಗಿ ನೋಡುವಂತೆ ಆಡಳಿತ ನಡೆಸುತ್ತಿದ್ದಾರೆ. ಆದರೆ ವಿಪಕ್ಷಗಳು ಅವರನ್ನು ದೂಷಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ದಕ್ಷ, ಪ್ರಾಮಾಣಿಕ ರಾಜಕಾರಣಕ್ಕೆ ಬೆಂಬಲ ನೀಡಲು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಅಧಿಕ ಜನ ಸ್ವಾಭಿಮಾನಿ ಸಮಾವೇಶದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

6 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

6 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

6 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

6 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

6 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

6 hours ago