ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ತೇಜೋವಧೆ ಮಾಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿದ್ದವು. ಆದರೆ ಹೈಕೋರ್ಟ್ ತೀರ್ಪಿನಿಂದ ಆ ಎರಡು ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಇಲ್ಲ ಎಂಬುದು ನಮಗೆ ಗೊತ್ತಿತ್ತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳಲ್ಲಿ ಸತ್ಯಕ್ಕೆ ಜಯ ಸಿಗುತ್ತೆ ಎಂಬ ನಂಬಿಕೆ ಇತ್ತು. ಈಗ ಅದು ನಿಜವಾಗಿದೆ. ಸತ್ಯ ಯಾವತ್ತೂ ಜಯಿಸುತ್ತದೆ ಎನ್ನುವುದಕ್ಕೆ ನ್ಯಾಯಾಲಯದ ತೀರ್ಪೆ ಸಾಕ್ಷಿ ಎಂದರು.
ನಮ್ಮ ನಿವೇಶನಗಳನ್ನು ಕಿತ್ತುಕೊಂಡು ಹಸ್ತಕ್ಷೇಪ ಇಲ್ಲ ಎಂಬುದು ನಮಗೆ ಗೊತ್ತಿತ್ತು ಮುಂದಾಗಿದ್ದರು. ಆದರೆ ಹೈಕೋರ್ಟ್, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್‌ಗೆ ಕೋರ್ಟ್ ತೀರ್ಪಿನಿಂದ ಮುಖಭಂಗವಾಗಿದೆ ಎಂದು ಹೇಳಿದರು. ಅಲ್ಲದೇ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಪರೋಕ್ಷವಾಗಿ ಬೋಕರ್‌ಗೆ ಹೋಲಿಸಿದರು.
ಇನ್ನೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಕೆಳಗಿಳಿಸಸುವುದೇ ಬಿಜೆಪಿ ಮತ್ತು ಜೆಡಿಎಸ್ ಅವರ ಅಜೆಂಡಾವಾಗಿತ್ತು. ಸ್ನೇಹಮಯಿ ಕೃಷ್ಣ ಕೂಲಿಗಾಗಿ ಕೆಲಸ ಮಾಡ್ತಿದ್ದಾರೆ. ಅವರಿಗೆ ಒಂದಿಷ್ಟು ಹಣ ನೀಡಿರುತ್ತಾರೆ. ಒಂದು ತನಿಖಾ ಸಂಸ್ಥೆಗೆ ಪ್ರಭಾವ ಬೀರಲಿಕ್ಕೆ ಇಡಿ ಮುಂದಾಗಿದೆ. ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರುವುದು ಇಡಿ ಉದ್ದೇಶ. ಇಡಿ ಅಧಿಕಾರಿಗಳಿಗೆ ಮಾನ ಮರ್ಯಾದೆ ಇದ್ದರೆ ಇಲ್ಲಿಗೆ ತನಿಖೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಇನ್ನೂ ಇ.ಡಿ. ಸಂಸ್ಥೆಯೂ, ಸ್ನೇಹಮಯಿ ಕೃಷ್ಣ ಮೇಲ್ ಮಾಡಿದ ತಕ್ಷಣ ಎಫ್ಐಆರ್ ಮಾಡಲಾಗುತ್ತದೆ. ಒಂದು ತನಿಖಾ ಸಂಸ್ಥೆ ತನಿಖೆ ಮಾಡುವಾಗ ಮತ್ತೊಂದು ತನಿಖಾ ಸಂಸ್ಥೆ ತನಿಖೆ ಮಾಡುವಂತಿಲ್ಲ. ಯಾವ ಕಾನೂನಿನಲ್ಲೂ ಇದಕ್ಕೆ ಅವಕಾಶ ಇಲ್ಲ. ಆದರೆ ಹೈಕೋರ್ಟ್‌ನಲ್ಲಿ ದೊಡ್ಡ ದೊಡ್ಡ ವಕೀಲರನ್ನು ಕರೆ ತಂದು ವಾದ ಮಂಡಿಸುತ್ತಿದ್ದಾರೆ. ಅವರಿಗೆ ಫೀಸ್ ಕೊಡಲು ಹಣ ಎಲ್ಲಿಂದ ಬಂದಿದೆ ಎಂದು ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ಹೋಗ್ತಾರೆ ಅಲ್ಲಿಯೂ ನಾವು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಸ್ಥಿರಗೊಳಿಸಲಿಕ್ಕೆ ಮುಂದಾಗ್ತಿದೆ. ಇದು ಕರ್ನಾಟಕ ರಾಜ್ಯ, ಇಲ್ಲಿ ಕೇಂದ್ರ ಆಟ ನಡೆಯೋಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನುದಾನ ತರುವ ಸಲುವಾಗಿ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಮುಂದಾಗಬೇಕು. ರಾಜ್ಯದ ಜನತೆಗೆ ಒಳ್ಳೆಯ ಕೆಲಸ ಮಾಡಲು ಕೈ ಜೋಡಿಸಿ. ಅದನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ತೆಗಿಬೇಕೆನ್ನುವ ಕೆಲಸ ಬಿಡಬೇಕು. ಇನ್ನೂ ಅಮೆರಿಕಾದಿಂದ ಭಾರತೀಯರನ್ನು ಬೇಡಿ ಹಾಕಿ ತರಲಾಗುತ್ತಿದೆ. ಹೀಗಾಗಿ ಕೇಂದ್ರ ನಾಯಕರು ಭಾರತೀಯರನ್ನ ಕಾಪಾಡುವ ಕೆಲಸ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.





