ಮೈಸೂರು

ಹೈಕೋರ್ಟ್‌ ತೀರ್ಪಿನಿಂದ ಬಿಜೆಪಿ, ಜೆಡಿಎಸ್‌ ಪಕ್ಷಕ್ಕೆ ಮುಖಭಂಗ: ಎಂ.ಲಕ್ಷ್ಮಣ್‌

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ತೇಜೋವಧೆ ಮಾಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮುಂದಾಗಿದ್ದವು. ಆದರೆ ಹೈಕೋರ್ಟ್‌ ತೀರ್ಪಿನಿಂದ ಆ ಎರಡು ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಇಲ್ಲ ಎಂಬುದು ನಮಗೆ ಗೊತ್ತಿತ್ತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳಲ್ಲಿ ಸತ್ಯಕ್ಕೆ ಜಯ ಸಿಗುತ್ತೆ ಎಂಬ ನಂಬಿಕೆ ಇತ್ತು. ಈಗ ಅದು ನಿಜವಾಗಿದೆ. ಸತ್ಯ ಯಾವತ್ತೂ ಜಯಿಸುತ್ತದೆ ಎನ್ನುವುದಕ್ಕೆ ನ್ಯಾಯಾಲಯದ ತೀರ್ಪೆ ಸಾಕ್ಷಿ ಎಂದರು.

ನಮ್ಮ ನಿವೇಶನಗಳನ್ನು ಕಿತ್ತುಕೊಂಡು ಹಸ್ತಕ್ಷೇಪ ಇಲ್ಲ ಎಂಬುದು ನಮಗೆ ಗೊತ್ತಿತ್ತು ಮುಂದಾಗಿದ್ದರು. ಆದರೆ ಹೈಕೋರ್ಟ್‌, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್‌ಗೆ ಕೋರ್ಟ್‌ ತೀರ್ಪಿನಿಂದ ಮುಖಭಂಗವಾಗಿದೆ ಎಂದು ಹೇಳಿದರು. ಅಲ್ಲದೇ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಪರೋಕ್ಷವಾಗಿ ಬೋಕರ್‌ಗೆ ಹೋಲಿಸಿದರು.

ಇನ್ನೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಕೆಳಗಿಳಿಸಸುವುದೇ ಬಿಜೆಪಿ ಮತ್ತು ಜೆಡಿಎಸ್‌ ಅವರ ಅಜೆಂಡಾವಾಗಿತ್ತು. ಸ್ನೇಹಮಯಿ ಕೃಷ್ಣ ಕೂಲಿಗಾಗಿ ಕೆಲಸ ಮಾಡ್ತಿದ್ದಾರೆ. ಅವರಿಗೆ ಒಂದಿಷ್ಟು ಹಣ ನೀಡಿರುತ್ತಾರೆ. ಒಂದು ತನಿಖಾ ಸಂಸ್ಥೆಗೆ ಪ್ರಭಾವ ಬೀರಲಿಕ್ಕೆ ಇಡಿ ಮುಂದಾಗಿದೆ. ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರುವುದು ಇಡಿ ಉದ್ದೇಶ. ಇಡಿ ಅಧಿಕಾರಿಗಳಿಗೆ ಮಾನ ಮರ್ಯಾದೆ ಇದ್ದರೆ ಇಲ್ಲಿಗೆ ತನಿಖೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನೂ ಇ.ಡಿ. ಸಂಸ್ಥೆಯೂ, ಸ್ನೇಹಮಯಿ ಕೃಷ್ಣ ಮೇಲ್ ಮಾಡಿದ ತಕ್ಷಣ ಎಫ್ಐಆರ್ ಮಾಡಲಾಗುತ್ತದೆ. ಒಂದು ತನಿಖಾ ಸಂಸ್ಥೆ ತನಿಖೆ ಮಾಡುವಾಗ ಮತ್ತೊಂದು ತನಿಖಾ ಸಂಸ್ಥೆ ತನಿಖೆ ಮಾಡುವಂತಿಲ್ಲ. ಯಾವ ಕಾನೂನಿನಲ್ಲೂ ಇದಕ್ಕೆ ಅವಕಾಶ ಇಲ್ಲ. ಆದರೆ ಹೈಕೋರ್ಟ್‌ನಲ್ಲಿ ದೊಡ್ಡ ದೊಡ್ಡ ವಕೀಲರನ್ನು ಕರೆ ತಂದು ವಾದ ಮಂಡಿಸುತ್ತಿದ್ದಾರೆ. ಅವರಿಗೆ ಫೀಸ್‌ ಕೊಡಲು ಹಣ ಎಲ್ಲಿಂದ ಬಂದಿದೆ ಎಂದು ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ಹೋಗ್ತಾರೆ ಅಲ್ಲಿಯೂ ನಾವು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಸ್ಥಿರಗೊಳಿಸಲಿಕ್ಕೆ ಮುಂದಾಗ್ತಿದೆ. ಇದು ಕರ್ನಾಟಕ ರಾಜ್ಯ, ಇಲ್ಲಿ ಕೇಂದ್ರ ಆಟ ನಡೆಯೋಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನುದಾನ ತರುವ ಸಲುವಾಗಿ ಬಿಜೆಪಿ ಮತ್ತು ಜೆಡಿಎಸ್‌ ಸಂಸದರು ಮುಂದಾಗಬೇಕು. ರಾಜ್ಯದ ಜನತೆಗೆ ಒಳ್ಳೆಯ ಕೆಲಸ ಮಾಡಲು ಕೈ ಜೋಡಿಸಿ. ಅದನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ತೆಗಿಬೇಕೆನ್ನುವ ಕೆಲಸ ಬಿಡಬೇಕು. ಇನ್ನೂ ಅಮೆರಿಕಾದಿಂದ ಭಾರತೀಯರನ್ನು ಬೇಡಿ ಹಾಕಿ ತರಲಾಗುತ್ತಿದೆ. ಹೀಗಾಗಿ ಕೇಂದ್ರ ನಾಯಕರು ಭಾರತೀಯರನ್ನ ಕಾಪಾಡುವ ಕೆಲಸ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

4 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

33 mins ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

42 mins ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

47 mins ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

50 mins ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

53 mins ago