ಮೈಸೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ನೀಡಿದೆ. ಇದನ್ನ ನಾವು ಹೇಳಿದ್ರೆ ನಮ್ಮ ವಿರುದ್ಧವೇ ತಿರುಗಿ ಬೀಳುತ್ತಾರೆ. ಸ್ನೇಹಮಯಿ ಕೃಷ್ಣರನ್ನ ಪೊಲೀಸರು ಬಂಧಿಸಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ ಸಾಫ್ಟ್ ಕಾರ್ನರ್ ಬೇಡ. ಸ್ನೇಹಮಯಿ ಕೃಷ್ಣ ಬಂಧಿಸುವಲ್ಲಿ ಪೊಲೀಸ್ ನವರು ಹಿಂದೇಟು ಹಾಕಿದರೆ ಕಮಿಷನರ್ ಕಚೇರಿ ಮುಂದೆ ಆಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲದಿದ್ದರೂ ಸಹ ಅವರನ್ನು ತಪ್ಪಿತಸ್ಥರಂತೆ ಬಿಂಬಿಸಲು ಹೊರಟಿರುವ ಇಡಿ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಹೋರಾಟ ನಡೆಸಲಿದೆ. ಇ.ಡಿ. ಸಂಸ್ಥೆ ಸುಮಾರು 104 ಪುಟಗಳ ವರದಿಯನ್ನು ಲೋಕಾಯುಕ್ತ ಎಡಿಜಿಪಿಗೆ ಸಲ್ಲಿಕೆ ಮಾಡಿದ್ದಾರೆ. ಆದರೆ ಈ ವರದಿಯನ್ನು ಕೆಲ ಮಾಧ್ಯಮಗಳಿಗೆ ಮಾತ್ರ ನೀಡಿದ್ದಾರೆ. ಇದರ ಹುನ್ನಾರವೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಡಿ ಅಧಿಕಾರಿಗಳು ತಮ್ಮ ವರದಿಯಲ್ಲಿ ಹಸಿ ಸುಳ್ಳು ಆಪಾದನೆ ವಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷದ ಒತ್ತಾಯದಿಂದ ಇಂತಹ ಸುಳ್ಳು ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಹಣದ ವಹಿವಾಟಿನಲ್ಲಿ ವ್ಯತ್ಯಾಸ ಕಂಡುಬಂದರೆ ಹಾಗೂ ಮನಿ ಲಾಂಡ್ರಿಂಗ್ ನಡೆದಿದೆ ಎಂದು ನ್ಯಾಯಾಲಯಲು ಸೂಚಿಸಿದರೆ ಮಾತ್ರ ಇಡಿ ತನಿಖೆಯನ್ನು ಕೈಗೊಳ್ಳಬೇಕು. ಆದರೆ ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಮಾಡಲು ಅವಕಾಶವೇ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಉದ್ದೇಶ ಪೂರ್ವಕವಾಗಿ ಬಿಜೆಪಿ ಇಡಿ ಮೂಲಕ ತನಿಖೆ ಮಾಡಿಸಿದೆ ಎಂದು ಆರೋಪಿಸಿದರು.
ಇನ್ನೂ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು 56 ಕೋಟಿ ರೂ. ಮೌಲ್ಯದ ಜಾಗವನ್ನು ಮುಡಾದಿಂದ ಪಡೆಯಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಹೀಗಿದ್ದರೂ ವಿಜಯನಗರ 3ನೇ ವಿಜಯನಗರದ 3ನೇ ಹಂತದಲ್ಲಿ ಚದರ ಅಡಿಗೆ 12 ಸಾವಿರ ರೂ.ಮೌಲ್ಯವಿದೆ ಎಂದರು.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯೂ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಇದೀಗ ಇ.ಡಿ. ಸಂಸ್ಥೆಯೂ ತನ್ನ ವರದಿಯನ್ನು ನ್ಯಾಯಾಲಯಕ್ಕೆ ನೀಡಿದೆ. ಹೀಗಾಗಿ ಈ ಎರಡು ವರದಿಗಳನ್ನು ಪರಿಶೀಲಿಸಿ ಮೂರನೇ ಅಥವಾ ಬದಲಿ ತನಿಖೆಗೆ ಆದೇಶಿಸುವ ನಿಟ್ಟಿನಲ್ಲಿ ಆಗಬಾರದು. ಈ ಮೂಲಕ ಬಿಜೆಪಿ ಅವರು ಹಾಗೂ ಆರ್‌ಎಸ್‌ಎಸ್ ಈ ತನಿಖೆಯನ್ನು ಸಿಬಿಐಗೆ ವಹಿಸಬಹುದೆಂಬ ಹುನ್ನಾರವಾಗಿದೆ ಎಂದು ಆರೋಪಿಸಿದರು.
ಮುಡಾ ಕಚೇರಿಯಲ್ಲಿ ಹಗರಣ ನಡೆದಿರುವುದು ಮಾರ್ಚ್ 2022 ರಿಂದ ಮೇ 2023ರಲ್ಲಿ ಅವಧಿಯಲ್ಲಿ, ಈ ಕಾಲದಲ್ಲಿಯೇ ಶೇ.70ರಷ್ಟು ನಿವೇಶನಗಳು ನೋಂದಣಿ ಆಗಿರುವುದು. ಆ ಸಂದರ್ಭದಲ್ಲಿ ಬಿಜೆಪಿ ಪಕ್ಷ ಹಾಗೂ ಬಸವರಾಜ ಬೊವ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದರು. ಹೀಗಾಗಿ ಅವರ ವಿರುದ್ಧ ಇಡಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ಇ.ಡಿ. ಸಂಸ್ಥೆ ಇಲ್ಲಿಯವರೆಗೂ 7083 ಪ್ರಕರಣಗಳನ್ನು ದಾಖಲು ಮಾಡಿದೆ. ಅವುಗಳಲ್ಲಿ ದೂರು ಸಾಬೀತಾಗಿರುವುದು ಮಾತ್ರ 43 ಪ್ರಕರಣಗಳಲ್ಲಿ ಅಷ್ಟೇ. ಇ.ಡಿ. ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸೇರಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ದಾಳವನ್ನಾಗಿ ಈ ಬಳಸುತ್ತಿದೆ. ಅಲ್ಲದೇ ಇಡಿ ದಾಖಲಿಸಿರುವ ಶೇ.90 ರಷ್ಟು ಪ್ರಕರಣಗಳು ವಿರೋಧ ಪಕ್ಷದ ಮುಖಂಡರ ಮೇಲೆ ಎಂದು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…