Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸುಳ್ಳು ಪ್ರಕರಣ ತನಿಖೆಯಲ್ಲಿ ಇಡಿ ಕಾಲಹರಣ: ಎಂ.ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ದಿ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಸಿಕ್ಕಿ ಹಾಕಿಸುವ ಪ್ರಯತ್ನಕ್ಕೆ ಬಿಜೆಪಿ ಪಕ್ಷ ಹುನ್ನಾರ ನಡೆಸುತ್ತಿದೆ. ಆದರೆ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಅದೊಂದು ಸುಳ್ಳು ಪ್ರಕರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಯಾವ ದಾಖಲೆಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಮುಡಾ ವಿಚಾರವಾಗಿ ಇಡಿ ಅಧಿಕಾರಿಗಳು ನಿರಂತರವಾಗಿ ವಿಧಾನಸೌಧದ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಮಾಡುತ್ತಿದ್ದಾರೆ. ಮುಡಾದ 14 ನಿವೇಶನಗಳಲ್ಲಿ ಸರಿಯಾದ ಸಾಕ್ಷ್ಯಾಧಾರ ಸಿಗದಿದ್ದರೆ ಏಕೆ ಕಾಲಹರಣ ಮಾಡಬೇಕು? ಇಡಿ ಅಧಿಕಾರಿಗಳು ಇನ್ನು ಎಷ್ಟು ದಿನಗಳ ಕಾಲ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದ್ದು ತಪ್ಪಿದೆಯೋ ಅಥವಾ ಸರಿ ಇದೆಯೋ ಎಂಬುದನ್ನು ತಿಳಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅವರು ಪ್ರತಿನಿತ್ಯ ಮಾಧ್ಯಮದ ಮೂಲಕ ಸಿದ್ದರಾಮಯ್ಯ ಹಾಗೂ ಸರ್ಕಾರದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇಡಿ ಅಧಿಕಾರಿಗಳು ದಿನನಿತ್ಯ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

 

Tags: