ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಸಿಕ್ಕಿ ಹಾಕಿಸುವ ಪ್ರಯತ್ನಕ್ಕೆ ಬಿಜೆಪಿ ಪಕ್ಷ ಹುನ್ನಾರ ನಡೆಸುತ್ತಿದೆ. ಆದರೆ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಅದೊಂದು ಸುಳ್ಳು ಪ್ರಕರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಯಾವ ದಾಖಲೆಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಮುಡಾ ವಿಚಾರವಾಗಿ ಇಡಿ ಅಧಿಕಾರಿಗಳು ನಿರಂತರವಾಗಿ ವಿಧಾನಸೌಧದ ಐಎಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಮಾಡುತ್ತಿದ್ದಾರೆ. ಮುಡಾದ 14 ನಿವೇಶನಗಳಲ್ಲಿ ಸರಿಯಾದ ಸಾಕ್ಷ್ಯಾಧಾರ ಸಿಗದಿದ್ದರೆ ಏಕೆ ಕಾಲಹರಣ ಮಾಡಬೇಕು? ಇಡಿ ಅಧಿಕಾರಿಗಳು ಇನ್ನು ಎಷ್ಟು ದಿನಗಳ ಕಾಲ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದ್ದು ತಪ್ಪಿದೆಯೋ ಅಥವಾ ಸರಿ ಇದೆಯೋ ಎಂಬುದನ್ನು ತಿಳಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅವರು ಪ್ರತಿನಿತ್ಯ ಮಾಧ್ಯಮದ ಮೂಲಕ ಸಿದ್ದರಾಮಯ್ಯ ಹಾಗೂ ಸರ್ಕಾರದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇಡಿ ಅಧಿಕಾರಿಗಳು ದಿನನಿತ್ಯ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…