ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಮೂಲ ಸಂವಿಧಾನವನ್ನು ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡುವ ವೇಳೆ ಜನ ಸಂಘ ವಿರೋಧಿಸಿತ್ತು. ಆಗ ಸಂವಿಧಾನದಲ್ಲಿ 395 ಪರಿಚ್ಛೇದಗಳಿದ್ದವು. ಆದರೆ ಈಗ 448 ಪರಿಚ್ಛೇದಗಳಿವೆ. ಇಲ್ಲಿವರೆಗೂ 104 ತಿದ್ದುಪಡಿಗಳಾಗಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಇನ್ನುಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ ಎಂದು ಹೇಳಿದರು.
ರಾಜ್ಯದಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು ಸಂವಿಧಾನದ ಅಡಿಯಲ್ಲಿ ಬರುವುದಿಲ್ಲ. ಆದರೆ ಎಲ್ಲರಿಗೂ ಶೇ.43% ಮೀಸಲಾತಿ ನೀಡಿದ್ದು, ಅದರಲ್ಲಿ ಶೇ. 4% ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದರು.
ಇನ್ನು ಕೇಂದ್ರದಲ್ಲಿ 400 ಸ್ಥಾನಗಳನ್ನು ಗೆದ್ದರೆ ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿಯ ಗೃಹ ಸಚಿವ ಅಮಿತ್ ಶಾ ಮತ್ತು ಅನಂತ್ ಕುಮಾರ್ ಸೇರಿದಂತೆ ಅನೇಕ ನಾಯಕರು. ಅಲ್ಲದೇ ಈಗ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಆ ರಾಜ್ಯಗಳಲ್ಲಿ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.





