ಮೈಸೂರು

ಮೀಸಲಾತಿ ನೀಡುವ ಅಧಿಕಾರವಿರುವುದು ಕೇಂದ್ರಕ್ಕೆ ಮಾತ್ರ, ಸಾಮಾನ್ಯ ಜ್ಞಾನವಿಲ್ಲದೇ ಬಿಜೆಪಿಯಿಂದ ಅಪಪ್ರಚಾರ: ಎಂ.ಲಕ್ಷ್ಮಣ್‌

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಮೂಲ ಸಂವಿಧಾನವನ್ನು ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚನೆ ಮಾಡುವ ವೇಳೆ ಜನ ಸಂಘ ವಿರೋಧಿಸಿತ್ತು. ಆಗ ಸಂವಿಧಾನದಲ್ಲಿ 395 ಪರಿಚ್ಛೇದಗಳಿದ್ದವು. ಆದರೆ ಈಗ 448 ಪರಿಚ್ಛೇದಗಳಿವೆ. ಇಲ್ಲಿವರೆಗೂ 104 ತಿದ್ದುಪಡಿಗಳಾಗಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಇನ್ನುಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು ಸಂವಿಧಾನದ ಅಡಿಯಲ್ಲಿ ಬರುವುದಿಲ್ಲ. ಆದರೆ ಎಲ್ಲರಿಗೂ ಶೇ.43% ಮೀಸಲಾತಿ ನೀಡಿದ್ದು, ಅದರಲ್ಲಿ ಶೇ. 4% ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದರು.

ಇನ್ನು ಕೇಂದ್ರದಲ್ಲಿ 400 ಸ್ಥಾನಗಳನ್ನು ಗೆದ್ದರೆ ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿಯ ಗೃಹ ಸಚಿವ ಅಮಿತ್‌ ಶಾ ಮತ್ತು ಅನಂತ್‌ ಕುಮಾರ್‌ ಸೇರಿದಂತೆ ಅನೇಕ ನಾಯಕರು. ಅಲ್ಲದೇ ಈಗ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಆ ರಾಜ್ಯಗಳಲ್ಲಿ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

7 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

8 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

8 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago