Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

ಜನಕಲ್ಯಾಣ ಸಮಾವೇಶಕ್ಕೆ ಮೈಸೂರಿನಿಂದ 1300 ಬಸ್‌ ವ್ಯವಸ್ಥೆ: ಎಂ.ಲಕ್ಷ್ಮಣ್‌

ಮೈಸೂರು: ಹಾಸನದಲ್ಲಿ ಡಿಸೆಂಬರ್‌ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ದಿ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು(ಡಿ.5) ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜನಕಲ್ಯಾಣ ಸಮಾವೇಶವೆಂದು ಕರೆಯಲಾಗಿದೆ. ಈ ಸಮಾವೇಶಕ್ಕೆ ಹಾಸನ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 3 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್‌ನ ಕಾರ್ಯಕರ್ತರು ಹಾಸನಕ್ಕೆ ತೆರಳಲು ಮೈಸೂರು ನಗರ ಮತ್ತು ಜಿಲ್ಲೆಯಿಂದ 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಯಾಕೆ ಸಮಾವೇಶ ನಡೆಸಲಾಗುತ್ತಿದೆ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಈ ಬಗ್ಗೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಉತ್ತರಿಸಲಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತ ಮಾಡಿರುವ ಕುರಿತು ಜನರಿಗೆ ತಿಳಿಸುವ ಸಮಾವೇಶವಾಗಿದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿರುವ ಶ್ರೀವತ್ಸ ಅವರ ಕ್ಷೇತ್ರದಲ್ಲಿ ವಕ್ಫ್‌ ಮಂಡಳಿಯಿಂದ 25 ವರ್ಷದ ಹಿಂದೆಯೇ ಸರ್ವೇ ನಂಬರ್‌ 153 ರಲ್ಲಿ 2 ಎಕರೆ ಜಮೀನು ಒತ್ತುವರಿಯಾಗಿದೆ. ಅಲ್ಲಿಯ ಜನತೆಗೆ ನೋಟಿಸ್‌ ನೀಡಿದ್ದು ಮಾಜಿ ಸಿಎಂ ಯಡಿಯೂರಪ್ಪಅವರು ಮುಖ್ಯಮಂತ್ರಿಯಾಗಿದ್ದಾಗ. ಆದರೆ ಪ್ರಸ್ತುತ ದಿನಗಳಲ್ಲಿ ಶ್ರೀವತ್ಸ ಅವರೇ ಮಾಧ್ಯಮಗಳ ಮುಂದೆ ಬಾಯಿ ಬಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Tags: