ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು(ಡಿ.5) ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜನಕಲ್ಯಾಣ ಸಮಾವೇಶವೆಂದು ಕರೆಯಲಾಗಿದೆ. ಈ ಸಮಾವೇಶಕ್ಕೆ ಹಾಸನ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 3 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್‌ನ ಕಾರ್ಯಕರ್ತರು ಹಾಸನಕ್ಕೆ ತೆರಳಲು ಮೈಸೂರು ನಗರ ಮತ್ತು ಜಿಲ್ಲೆಯಿಂದ 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಯಾಕೆ ಸಮಾವೇಶ ನಡೆಸಲಾಗುತ್ತಿದೆ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಈ ಬಗ್ಗೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತರಿಸಲಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತ ಮಾಡಿರುವ ಕುರಿತು ಜನರಿಗೆ ತಿಳಿಸುವ ಸಮಾವೇಶವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿರುವ ಶ್ರೀವತ್ಸ ಅವರ ಕ್ಷೇತ್ರದಲ್ಲಿ ವಕ್ಫ್ ಮಂಡಳಿಯಿಂದ 25 ವರ್ಷದ ಹಿಂದೆಯೇ ಸರ್ವೇ ನಂಬರ್ 153 ರಲ್ಲಿ 2 ಎಕರೆ ಜಮೀನು ಒತ್ತುವರಿಯಾಗಿದೆ. ಅಲ್ಲಿಯ ಜನತೆಗೆ ನೋಟಿಸ್ ನೀಡಿದ್ದು ಮಾಜಿ ಸಿಎಂ ಯಡಿಯೂರಪ್ಪಅವರು ಮುಖ್ಯಮಂತ್ರಿಯಾಗಿದ್ದಾಗ. ಆದರೆ ಪ್ರಸ್ತುತ ದಿನಗಳಲ್ಲಿ ಶ್ರೀವತ್ಸ ಅವರೇ ಮಾಧ್ಯಮಗಳ ಮುಂದೆ ಬಾಯಿ ಬಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…