ಮೈಸೂರು

ವಕ್ಫ್ ಬಿಲ್ ಮಂಡನೆ ವಿರುದ್ಧಕಾಂಗ್ರೆಸ್ ದೊಡ್ಡ ಮಟ್ಟದ ಹೋರಾಟ ಮಾಡಲಿದೆ: ಎಂ.ಲಕ್ಷ್ಮಣ್‌

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುಮಾರು 8.72 ಲಕ್ಷ ರೂ. ಮೌಲ್ಯದ 38 ಲಕ್ಷ ಎಕರೆ ವಕ್ಫ್ ಪ್ರಾಪರ್ಟಿ ಇದೆ. ಅವುಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 32 ವಕ್ಫ್ ಬೋರ್ಡ್‌ಗಳಿವೆ. ಆದರೆ ವಕ್ಫ್‌ ಆಸ್ತಿಗಳಲ್ಲಿ ಮುಸ್ಲಿಂ ವಕ್ಫ್‌ ಬೋರ್ಡ್ ಆಸ್ತಿಗಳಿಗಿಂತ ಹಿಂದೂ ದೇವಾಲಯಗಳ ಮುಜರಾಯಿ ಇಲಾಖೆಗೆ ಸೇರಿದ ಆಸ್ತಿಗಳೇ ಅಧಿಕವಾಗಿವೆ ಎಂದು ಹೇಳಿದರು.

ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಈ ನಾಲ್ಕು ರಾಜ್ಯಗಳಲ್ಲೇ ಸುಮಾರು 13 ಲಕ್ಷ ಎಕರೆ ಹಿಂದು ದೇವಾಲಯಗಳ ಆಸ್ತಿ ಇದೆ. ಇಲ್ಲೇ ಇಷ್ಟಿದ್ದರೆ, ಇಡೀ ದೇಶಾದ್ಯಂತ ಇನ್ನೆಷ್ಟು ಇರಹುದು ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದರೆ ಬಿಜೆಪಿಯವರ ಪ್ರಮುಖ ಉದ್ದೇಶ ಮುಸಲ್ಮಾನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಬಿಂಬಿಸುವುದಾಗಿದೆ. ಹೀಗಾಗಿ ವಕ್ಫ್‌ ಬಿಲ್‌ ಮಂಡನೆ ವಿರುದ್ಧ ಹೋರಾಟ ಮಾಡಲಾಗುವುದ. ಆದರೆ ಕಾಂಗ್ರೆಸ್‌ ಪಕ್ಷದಿಂದ ಮುಸಲ್ಮಾನ ಸಮುದಾಯಕ್ಕೆ ಯಾವಾಗಲೂ ಬೆಂಬಲವವಿರುತ್ತದೆ ಎಂದರು.

ಪೌರ ಕಾರ್ಮಿಕರನ್ನು ಮೇ. 1 ರಿಂದ ಖಾಯಂ ಮಾಡುವ ಸಿಎಂ ನಿರ್ಧಾರ ಮಹತ್ವದ ಹೆಜ್ಜೆ

ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಮೇ.1 ರಿಂದ ಖಾಯಂ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರರ ನಿರ್ಧಾರದ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಮಹತ್ವದ ಹೆಜ್ಜೆಯಾಗಿದೆ. ಅವರ ಈ ನಿರ್ಧಾರದಿಂದ ರಾಜ್ಯದಲ್ಲಿರುವ ಸುಮಾರು 7 ಲಕ್ಷದಷ್ಟು ಪೌರ ಕಾರ್ಮಿಕರಿಗೆ ಅನುಕೂಲ ಆಗುತ್ತದೆ. ಅಲ್ಲದೇ ಐದಾರು ಸಾವಿರ ಸಂಬಳ ಪಡೆಯುತ್ತಿದ್ದ ಪೌರ ಕಾರ್ಮಿಕರಿಗೆ 50 ಸಾವಿರ ಸಂಬಳ ಬರುತ್ತದೆ. ಹೀಗಾಗಿ ಅವರ ಬದುಕು ಹಸನಾಗಲಿದ್ದು, ಇಂತಹ ಒಂದು ಮಹತ್ತರವಾದ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಕೈಗೊಂಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

1 hour ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

6 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

11 hours ago