ಲಕ್ಷ್ಮಣ್
ಮೈಸೂರು : ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ(ಇ.ಡಿ)ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷ ಹಾಗೂ ದಲಿತ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೆ.ಪಿ.ಪಿ.ಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ, ಕೇಂದ್ರ ಸರ್ಕಾರದ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಂಡು ದಲಿತ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಡಾ.ಪರಮೇಶ್ವರ್ ಅವರು ತಮ್ಮ ತಂದೆ ಕಾಲದಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಾ ಬಂದಿದ್ದಾರೆ. ಅವರ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದರೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮೇಲೆ ತನಿಖೆ ನಡೆಸಬೇಕು. ಇ.ಡಿ ಅವರಿಗೆ ದಾಳಿ ಮಾಡಲು ಅಧಿಕಾರ ಇಲ್ಲ. ಆದರೆ, ಅಧಿಕಾರಿ ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸಿದ್ದಾರೆ. ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ. ದಲಿತ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕಿಡಿಕಾರಿದರು.
ಶೇ.98 ವಿರೋಧ ಪಕ್ಷಗಳೇ ಟಾರ್ಗೆಟ್ ;
ಇಡಿ ದಾಳಿ ಮಾಡಿರುವ ಬಗ್ಗೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇದುವರೆಗೆ ಕೇಂದ್ರ ಸರ್ಕಾರ 28,878 ಇಡಿ ದಾಳಿ ಮಾಡಿದೆ. ಅದರಲ್ಲಿ ಕೇವಲ 992 ಪ್ರಕರಣಗಳಿಗೆ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.
ಶಿಕ್ಷೆ ಆಗಿರುವು ಕೇವಲ 23 ಪ್ರಕರಣಗಳಲ್ಲಿ ಮಾತ್ರ. ಶೇಕಡಾ 98 ಪರ್ಸೆಂಟ್ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದ್ದಾರೆ.
ದಲಿತ ಮುಖಂಡರೇ ಟಾರ್ಗೆಟ್ ;
ಏಳೆಂಟು ದಲಿತ ಮುಖಂಡರನ್ನು ಲೀಸ್ಟ್ ಮಾಡಿದ್ದು, ಇವರನ್ನು ಟಾರ್ಗೆಟ್ ಮಾಡಿ ದಾಳಿ ಮಾಡುವ ಸಾಧ್ಯತೆ ಇದೆ. ಜಾತಿ ಗಣತಿ ವರದಿ ಬಂದರೆ ದಲಿತರು ತಮ್ಮ ಪರವಾಗಿ ಇರಲ್ಲ ಅಂತ ಹೀಗೆಲ್ಲಾ ಮಾಡುತ್ತಿದ್ದಾರೆ. ನಾವೆಲ್ಲರೂ ಡಾ. ಪರಮೇಶ್ವರ್ ಜೊತೆಗಿರುತ್ತೇವೆ ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…