ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಕಟಣೆಯಲ್ಲಿ ತಿಳಸಲಾಗಿದೆ.
೨೦೨೪ರ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ಬದಲಿಸುವ ಚುನಾವಣೆಯಾಗಿದೆ. ಸಂವಿಧಾನದ ಪೂರ್ವ ಪೀಠಿಕೆಯಲ್ಲಿರುವ ಜ್ಯಾತ್ಯಾತೀತ ಮತ್ತು ಸವಾಜವಾದಿ ತತ್ವಗಳೇ ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ಬಿಜೆಪಿ ಪಕ್ಷ ೨೦೧೪ರ ಲೋಕಸಭಾ ಚನಾವಣೆ ಪೂರ್ವದಲ್ಲಿ ಘೋಷಿಸಿದ್ದ ಭ್ರಷ್ಟಾಚಾರ ಮುಕ್ತ ಆಡಳಿತ, ವರ್ಷಕ್ಕೆ ೨ಕೋಟಿ ಉದ್ಯೋಗ ಸೃಷ್ಟಿ, ರೈತರ ಬೆಳೆಗೆ ದ್ವಿಗುಣ ಬೆಲೆ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ೧೫ ಲಕ್ಷ ಹಾಕುವುದೂ ಸೇರಿದಂತೆ ಯಾವ ಭರವಸೆಯನ್ನೂ ಇದುವರೆಗೆ ಈಡೇರಿಸಿಲ್ಲ.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತದ ಫಲವಾಗಿ ಬೆಲೆ ಏರಿಕೆ, ಭ್ರಷ್ಟಾಚಾರ, ಕೋಮುದ್ವೇಷ ದೇಶದ ಜನರ ನೆಮ್ಮದಿಯನ್ನು ಹಾಳುಮಾಡಿದೆ. ಇಂತಹ ಸಂದರ್ಭದಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ಕೋಮವಾದಿ ಬಿಜೆಪಿ ಪಕ್ಷವನ್ನು ಸೋಲಿಸಿ, ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ಮತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರವನ್ನೂ ಒಳಗೊಂಡಂತೆ ಕರ್ನಾಟಕದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆ ಆಗಿರುವ ಮದನ್ ಪಟೇಲ್ ಶ್ರಮಿಸುತ್ತಾರೆ ಎಂದು ಪಕ್ಷ ಭಾವಿಸಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…