ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ.
ಡಿಸೆಂಬರ್ 21 ರಿಂದ 31 ರವರೆಗೆ ಸುಮಾರು 11 ದಿನಗಳ ಕಾಲ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಮಂಡಳಿ ವತಿಯಿಂದ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಈ ಮಾಗಿ ಉತ್ಸವಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರವಾಸಿಗರನ್ನು ಆಕರ್ಷಿಸಲಿದೆ.
ಈ ಬಾರಿಯ ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಅರ್ಜುನ ಆನೆಯ ಆಕೃತಿ ಪ್ರಮುಖ ಆಕರ್ಷಣಿಯವಾಗಿದೆ. ಇದರ ಜೊತೆಯಲ್ಲಿ ಹಲವು ಕಲಾಕೃತಿಗಳು ಮೂಡುತ್ತಿವೆ.
ಲಕ್ಷಾಂತರ ಅಲಂಕಾರಿಕ ಹೂಗಳನ್ನು ಈ ಉತ್ಸವಕ್ಕೆ ಬಳಕೆ ಮಾಡಲಾಗುತ್ತಿದ್ದು, ಮಲೆ ಮಹದೇಶ್ವರ ಸ್ವಾಮಿ ದೇವಾಲಯ, ಸೋಮನಾಥ ದೇವಾಲಯ, ಹೊಯ್ಸಳ ದೇವಾಲಯ, ಶಿವನ ದೇವಾಲಯಗಳು ಹೂವಿನಲ್ಲಿ ಕಂಗೊಳಿಸಲಿವೆ.
ಮಾಗಿ ಉತ್ಸವದಲ್ಲಿ ಈ ಭಾರಿ ಟಿಕೆಟ್ ದರ ನಿಗದಿ ಮಾಡಲಾಗಿದ್ದು ವಯಸ್ಕರು, ವಿದೇಶಿಗರಿಗೆ 30 ರೂ. ನಿಗದಿ ಮಾಡಲಾಗಿದೆ. ಇನ್ನು 10 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ 20 ರೂ. ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಆದೇಶ ಹೊರಡಿಸಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…