ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಜಾತ್ರೆಯ ಅಂಗವಾಗಿ ನಾಲ್ಕು ದಿನಗಳ ಕಾಲ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹಾಲರವಿ ಸೇವೆ, ಎಣ್ಣೆ ಮಜ್ಜನ ಹಾಗೂ ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಜಾತ್ರೋತ್ಸವದ ದಿನ ಸ್ವಾಮಿಯ ಉತ್ಸವಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಮಂಗಳವಾದ್ಯಗಳೊಂದಿಗೆ ದೇವಸ್ಥಾನದ ಸುತ್ತ ಮೂರು ಪ್ರದಕ್ಷಿಣೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಅರ್ಚಕರು ಹಾಗೂ ಹರಕೆ ಹೊತ್ತ ಭಕ್ತರು ಕೊಂಡ ಹಾಯುವ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡರು. ಜಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ದೇವಸ್ಥಾನದ ವ್ಯವಸ್ಥಾಪಕ ಮಂಡಳಿಯಿಂದ ಪ್ರಸಾದ ವಿತರಿಸಲಾಯಿತು.
ಮಾಜಿ ಶಾಸಕ ಕೆ. ಮಹದೇವ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಅರ್ಚಕರು, ಸ್ಥಳೀಯ ಮುಖಂಡರು ಸೇರಿದಂತೆ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್ 11ರ ಮಧ್ಯಾಹ್ನ ದೇವಾಲಯದ…
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್ ಮಿಶ್ರಣ…
ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…
ಮೈಸೂರು: ಕಾಂಗ್ರೆಸ್ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಈ ಬಾರಿಯ ದೀಪಾವಳಿ ಜಾತ್ರಾ ಮಹೋತ್ಸವ ಮಲೆ ಮಹದೇಶ್ವರ ಬೆಟ್ಟದ…
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ…