ಮೈಸೂರು

ನಂಜೀಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಮಹದೇಶ್ವರಸ್ವಾಮಿ ಕೊಂಡೋತ್ಸವ

ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ ಬಗೆಯ ಹೂವುಗಳಿಂದ ರಥವನ್ನು ಅಲಂಕೃತಗೊಳಿಸಿ, ಮಧುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ವಿರಾಜಮಾನವಾಗಿ ಕೂರಿಸಿ ಗ್ರಾಮದ ಬೀದಿಗಳಲ್ಲಿ ಜಾನಪದ ಕಲಾ ತಂಡಗಳಾದ ವೀರಗಾಸೆ ಕುಣಿತ, ನಗಾರಿ, ಮಂಗಳ ವಾದ್ಯಗಳು ಮೊಳಗಿ, ಸತ್ತಿಗೆಗಳು ಮೆರವಣಿಗೆಗೆ ಮೆರಗು ನೀಡಿದವು.

ಬೆಳಿಗ್ಗೆಯಿಂದಲೇ ಹೋಮ, ಹವನಗಳು ನಡೆದವು. ದೇವರ ಉತ್ಸವಮೂರ್ತಿಯನ್ನು ನುಗು ನದಿ ದಡಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನದ ಬಳಿಗೆ ತರಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದ್ದ ಕೊಂಡೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರು ಕೊಂಡ ಹಾಯುವುದರ ಮೂಲಕ ಭಕ್ತಿಯನ್ನು ಮೆರೆದರು. ನಂತರ ದೇವಸ್ಥಾನದ ಬಳಿ ವೃಕ್ಷ ಪೂಜೆ, ಬಸವ ಪೂಜೆ, ಮಾಡಲಾಯಿತು. ಬಳಿಕ ಭಕ್ತರೆಲ್ಲಾ ಸೇರಿ ಶ್ರೀ ಮಲೈಮಹದೇಶ್ವರಸ್ವಾಮಿ ರಥ ಎಳೆದು ಹರಕೆ ತಿರಿಸಿದರು. ನಂತರ ಅನ್ನ ಸಂತರ್ಪಣೆ ನಡೆಯಿತು.

ಗ್ರಾಮದ ಗೌಡಿಕೆ ಶಿವಮಲ್ಲಪ್ಪ, ಶಿವರಾಜಪ್ಪ ಪ್ರಭುಸ್ವಾಮಿ, ಗುರುಸ್ವಾಮಿ, ಎನ್ ಪಿ.ನಾಗರಾಜಪ್ಪ, ಎನ್.ಪಿ.ಶಿವಣ್ಣ, ಶಿವಕುಮಾರ್, ಶಿಕ್ಷಕರಾದ ಪರಶಿವಮೂರ್ತಿ ಎನ್ ಪಿ, ಮಹೇಶ್‌, ಕುಮಾರ, ರವಿ, ಮಂಜುನಾಥ, ಮಹದೇವಪ್ಪ, ಸತೀಶ್, ಸುತ್ತಮುತ್ತಲಿನ ಸಹಸ್ರಾರು ಭಕ್ತರು ಭಾಗವಹಿಸಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago