ಮೈಸೂರು

ಮಹಾತ್ಮ ಗಾಂಧೀಜಿ 155ನೇ ಜಯಂತಿ: ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ದಿನಾಂಕ : 06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.

ನಿಬಂಧನೆಗಳು: ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

6 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

7 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

7 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

7 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

7 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

7 hours ago