Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ನಿಷೇಧ

ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.

ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು.

ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.

ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ.

ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ