ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.
ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು.
ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.
ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…