ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆ ಅಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. ಈಗಲೂ ಆಚರಿಸಲು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಸಾರ್ವಜನಿಕರು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಬೆಟ್ಟಕ್ಕೆ ಬರುತ್ತಾರೆ. ಆಸಕ್ತರಿಗೆ ಚಾಮುಂಡೇಶ್ವರಿ ಇದ್ದಾಳೆ. ನಾಸಿಕ್ತರಿಗೆ ಬೇರೆಯವರು ಇರಬಹುದು. ಮಹಿಷಾ ದಸರಾ ಹೆಸರಿನಲ್ಲಿ ಬೆಟ್ಟದಲ್ಲಿ ಅನಾಚಾರ ಮಾಡಲು ಬಿಡುವುದಿಲ್ಲ ಮಹಿಷಾ ದಸರಾ ನಿಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌‍ ಆಯುಕ್ತರಿಗೆ ನೇರವಾಗಿ ಹೇಳುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಸಂಘರ್ಷವಾದರೂ ಪರವಾಗಿಲ್ಲ. ತಡೆಯುತ್ತೇವೆ ಎಂದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡದಂತೆ ಮನವಿ ಮಾಡುತ್ತೇನೆ. ಮಹಿಷಾ ದಸರಾ ಆಚರಿಸುವವರಿಗೆ ಒಂದು ಕೇಳುತ್ತೇನೆ. ಅವರ ಮನೆಯಲ್ಲಿ ಯಾವುದಾದರೂ ಫೋಟೋ ಇಟ್ಟು ಆಚರಿಸಲಿ. ಮಹಿಷಾನಂತಹ ಮಗು ಹುಟ್ಟಲೆಂದು ಕೇಳಿಕೊಳ್ಳಲಿ. ಹೊರಗೆ ಆಚರಿಸಿ ಹಿಂದೂ ಭಕ್ತರ ಭಾವನೆಗೆ ಧಕ್ಕೆ ತರುವುದು ಬೇಡ ಎಂದು ನುಡಿದರು.

ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪಸಿಂಹ, ಹಿಂದೂ ಧರ್ಮದ ಅರಿವಿಲ್ಲದೇ ಬಹಳಷ್ಟು ಜನ ಮಾತಾಡುತ್ತಾರೆ. 700 ವರ್ಷ ಮುಸ್ಲಿಂರನ್ನು, 200 ವರ್ಷಗಳ ಕ್ರೈಸ್ತರನ್ನು ಸಹಿಸಿಕೊಂಡು ಶೇ. 80 ಹಿಂದೂಗಳು ಉಳಿದಿದ್ದಾರೆ. ಇನ್ನೂ ಸೊಳ್ಳೇ, ನೊಣಗಳನ್ನು ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿಯಿದೆ ಎಂದರು.

ಹೈಕಮಾಂಡ್‌ ನಿರ್ಧಾರ ಬೆಂಬಲಿಸುತ್ತೇವೆ : ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ನಾಯಕರು ಯಾವುದೇ ನಿರ್ಧಾರ ಕೈಗೊಂಡರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ನಿರ್ಧಾರವನ್ನು ಮುಖಂಡರು, ಕಾರ್ಯಕರ್ತರು ಬೆಂಬಲಿಸುತ್ತಾರೆ. ಇವತ್ತಿಗೂ ಬಿ.ಎಸ್‌‍.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎರಡೆರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಹೇಳಿರುವುದಕ್ಕೆ ಬದ್ಧರಾಗಿರುತ್ತೇವೆ ಎಂದರು.

ಕರ್ನಾಟಕದಲ್ಲಿ 2004ರಿಂದ ಸತತವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ. 2004-18, 2009-19, 2014-17, 2019- 25 ಸ್ಥಾನಗಳು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗೆ ಮರುಳಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಭಕ್ತರ ಭಾವನೆಗೆ ಧಕ್ಕೆ: ಮಹಿಷಾ ದಸರಾ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಟಿ.ಎಸ್‌‍.ಶ್ರೀವತ್ಸ ಅವರು, ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಕೊಡುವ ಮಹಿಷಾ ದಸರಾವನ್ನು ತಡೆಯುತ್ತೇವೆ. ಭಕ್ತರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಇದನ್ನು ಸಹಿಸಲಾಗದು. ಚಾಮುಂಡೇಶ್ವರಿಯಿಂದ ಮೈಸೂರು ಹೆಸರು ಬಂದಿದೆ.

ದಸರಾದಲ್ಲಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತೇವೆ. ಮಹಿಷಾಸುರ ನೋಡಿಕೊಂಡು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿಲ್ಲ. ದೇಶದ ವಿವಿಧ ರಾಜ್ಯಗಳಿಂದ ಭಕ್ತರು ದೇವಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದನ್ನು ತಡೆಯುವ ದೊಡ್ಡ ಸಂಚು ಇದು ಎಂದರು. ರಾತ್ರಿಯೆಲ್ಲಾ ಬೆಟ್ಟದಲ್ಲಿ ಮಲಗಿ ಪ್ರತಿಭಟಿಸುತ್ತೇವೆ. ನಮನ್ನು ದಾಟಿಕೊಂಡು ಹೋಗಿ ಆಚರಿಸಲಿ. ಮಹಿಷಾ ದಸರಾ ಆಚರಣೆಗೆ ಸರ್ಕಾರ ಅವಕಾಶ ಕೊಡಬಾರದು ಎಂದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago