ಮೈಸೂರು

ವಿರೋಧ-ನಿರ್ಬಂಧ ನಡುವೆ ಇಂದು ಮಹಿಷಾ ದಸರಾ ಆಚರಣೆ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು: ಈ ಬಾರಿ ಮೈಸೂರು ದಸರಾ ವಿಶೇಷ ಸುದ್ದಿಯಲ್ಲಿದೆ, ಕಾರಣ ಮಹಿಷಾ ದಸರಾ ಆಚರಣೆ, ಬಿಜೆಪಿ ನಾಯಕರು ಮತ್ತು ಹಲವರ ವಿರೋಧದ ನಡುವೆ ಇಂದು ಶುಕ್ರವಾರ ಮಹಿಷಾ ದಸರಾ ಆಚರಣೆಯಾಗುತ್ತಿದ್ದು, ಮೈಸೂರು ನಗರದಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಇಂದು ಬೆಳ್ಳಂಬೆಳಗ್ಗೆಯೇ ಮೈಸೂರಿಗೆ ಆಗಮಿಸುವವರನ್ನು ಪೊಲೀಸರು ತಪಾಸಣೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಹೋಗುವವರನ್ನು ಬೆಟ್ಟದ ತಪ್ಪಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಪಾಸಣೆ ಮಾಡಿದ್ದಾರೆ. ಮತ್ತೊಂದೆಡೆ ಇಂದು ಚಾಮುಂಡಿ ಬೆಟ್ಟಕ್ಕೆ ಬರು ಭಕ್ತರಿಗೂ ನಿರ್ಬಂಧ ವಿಧಿಸಲಾಗಿದೆ.

ಮೈಸೂರು ನಗರದ ಪುರಭವನದಲ್ಲಿ ಮಹಿಷ ದಸರಾ ಆರಂಭವಾಗುತ್ತಿದ್ದು, ಟೌನ್‌ಹಾಲ್‌ನಲ್ಲಿ ಕುಳಿತುಕೊಳ್ಳಲು ಎರಡು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.  ಈಗಾಗಲೇ ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಷ ದಸರಾಕ್ಕೆ ಜನರು ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಪುರಭವನದ ಆವರಣದಲ್ಲಿ ದಮ್ಮ ದೀಕ್ಷಾ ಸಮಾರಂಭ ನಡೆಯಲಿದೆ.

ಮಂಡ್ಯದಿಂದ ಮೈಸೂರಿಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸಮಾನ ಮನಸ್ಕರ ವೇದಿಕೆಯಿಂದ ನೂರಾರು ಸಂಖ್ಯೆಯಲ್ಲಿ ಮಹಿಷ ದಸರಾಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇತ್ತ ಮಹಿಷ ಉತ್ಸವಕ್ಕೆ ಚಾಮರಾಜನಗರದಿಂದಲೂ ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಮೈಸೂರಿಗೆ ಆಗಮಿಸಿದ್ದು, ಚಾಮರಾಜನಗರ ಜಿಲ್ಲೆಯ ವಿವಿಧೆಡೆಯಿಂದ ಹೊರಟ ಕಾರ್ಯಕರ್ತರು ಹತ್ತಾರು ಬಸ್‌ಗಳಲ್ಲಿ ಮೈಸೂರಿನತ್ತ ಆಗಮಿಸಿದ್ದಾರೆ. ಆರಂಭದಲ್ಲಿ ಚಾಮರಾಜನಗರದಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಹಿಷಾಸುರನಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಮೈಸೂರಿನತ್ತ ಪಯಣ ಬೆಳೆಸಿದರು.

ಯಾರ್ಯಾರು ಭಾಗಿ: ಇಂದು ನಡೆಯುವ ಮಹಿಷ ದಸರಾ ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮಿಜಿ, ಇತಿಹಾಸ ತಜ್ಞ ನಂಜರಾಜೇ ಅರಸು, ಕೆ ಎಸ್ ಭಗವಾನ್, ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರ ಗುರು ಸೇರಿದಂತೆ ಪ್ರಗತಿಪರ ಚಿಂತಕರು, ದಲಿತ ನಾಯಕರು ಭಾಗಿಯಾಗಲಿದ್ದಾರೆ.

ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹಿನ್ನೆಲೆ ಬೆಟ್ಟದ ಮೇಲೆ ಮಾಧ್ಯಮಗಳಿಗೂ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿಬೆಟ್ಟದ ಮಾರ್ಗ ತಾವರೆಕಟ್ಟೆ ಬಳಿ ಬ್ಯಾರಿಕೇಡ್ ಹಾಕಿ ಎಲ್ಲರನ್ನೂ ತಡೆಯಲಾಗಿದ್ದು, ಇಬ್ಬರು ಎಸಿಪಿ, 5 ಜನ ಇನ್ಸಪೆಕ್ಟರ್, 6 ಸಬ್ ಇನ್ಸ್‌ಪೆಕ್ಟರ್, ಎಎಸ್‌ಐ ಸೇರಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ 2 ಕೆಎಸ್‌ಆರ್‌ಪಿ ತುಕಡಿ 2 ಸಿಆರ್‌ ತುಕಡಿ 2 ಖಾಲಿ ಬಸ್ ನಿಯೋಜನೆ ಮಾಡಲಾಗಿದೆ.

andolanait

Recent Posts

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

48 mins ago

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…

1 hour ago

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

4 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

4 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

4 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

4 hours ago