ಮೈಸೂರು : ಪ್ರತಾಪ್ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, ಸರಸ್ವತಿ ಪುರಂ ನಲ್ಲೋ, ಸಿದ್ದಾರ್ಥ ಬಡಾವಣೆಯಲ್ಲೋ ಬಂದು ಸಿಎಂ ಈ ರೀತಿ ಹೇಳೋಕೆ ಆಗಲ್ಲ. ಉದಯಗಿರಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬಾಂಧವರ ಮುಂದೆ ಹೋಗಿ ಕೈ ಮುಗಿದು ನನ್ನ ಸೋಲಿಸಲು ಕರೆ ಕೊಟ್ಟಿದ್ದಾರೆ.
ತಮ್ಮ ಬಾಂಧವರ ಉದ್ಧಾರಕ್ಕೆ ಮಾತ್ರ ಸಿದ್ದರಾಮಯ್ಯ ಇರೋದು ಎಂಬುದು ನನಗೆ ಗೊತ್ತು. ತಮ್ಮ ಬಾಂಧವರ ಮುಂದೆ ಕೈಮಗಿದು ನನ್ನ ಸೋಲಿಸಿ ಅಂತಾ ಕೇಳುವ ದೈನಾಸಿ ಸ್ಥಿತಿ ಸಿಎಂ ಗೆ ಬರಬಾರದಿತ್ತು ಎಂದು ಸಂಸದ ಪ್ರತಾಪ್ ವ್ಯಂಗ್ಯವಾಡಿದ್ದಾರೆ.
ನನ್ನನ್ನು ಯಾಕೆ ಜನ ಸೋಲಿಸಬೇಕು ಅಂತಾ ಸಿಎಂ ಐದು ಹತ್ತು ಕಾರಣ ಕೊಡಲಿ. ಹೈವೆ ಮಾಡಿಸಿದ್ದು ನನ್ನ ತಪ್ಪಾ? ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದು ತಪ್ಪಾ? ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಹೊರಟ್ಟಿದ್ದು ತಪ್ಪಾ? ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ? ಯಾವ ಕಾರಣಕ್ಕೆ ಮೈಸೂರು ಜನ ಪ್ರತಾಪ್ ಸಿಂಹನನ್ನು ಸೋಲಿಸಬೇಕು ಹೇಳಿ? 40 ವರ್ಷದಿಂದ ಸಿದ್ದರಾಮಯ್ಯ ರಾಜಕೀಯದಲ್ಲಿದ್ದಾರೆ. ಮೈಸೂರಿಗೆ ಮಾಡಿರುವ ಕೆಲಸ ಏನೂ ಎಂಬುದು ಹೇಳಲಿ. ಕೆಲಸ ಮಾಡಿದವನನ್ನು ಸೋಲಿಸಬೇಕು ಅಂತಾ ಕೈ ಮುಗಿದು ಸಿಎಂ ಕೇಳಿದರೆ ಜನ ಅದನ್ನು ಒಪ್ಪುತ್ತಾರಾ?
ಸಿದ್ದರಾಮಯ್ಯ ಅವರಿಗೆ ಬಡವರ ಮಕ್ಕಳ ಉದ್ಧಾರವಾಗಬಾರದು. ಬಡವರ ಮಕ್ಕಳು ಬೆಳೆಯಬಾರದು. ಅವರು ಅವರ ಮಕ್ಕಳು ಮಾತ್ರ ರಾಜಕಾರಣ ಮಾಡ್ತಾ ಇರಬೇಕು ಅಷ್ಟೆ. ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಮಾಡಿ ರಾಜ್ಯದ ಸೌಹಾರ್ದತೆ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಸಾಲು ಸಾಲು ಹಿಂದೂ ಕಾರ್ಯಾಕರ್ತರ ಕೊಲೆಯಾಯಿತು. ಇದಕ್ಕೆ ಯಾರು ಕಾರಣ? ಸಿದ್ದರಾಮಯ್ಯ ಪ್ರತಿ ಬಾರಿಯೂ ಪ್ರಧಾನಿ ಮೋದಿ ವಿರುದ್ದ ಮಾತಾಡುತ್ತಾರೆ. ಇದು ಒಂಥರ ಆಕಾಶದ ಕಡೆ ಮುಖ ಮಾಡಿ ಉಗಿದಂತೆ. ಈ ಕೆಲಸವನ್ನು ನಿರಂತರವಾಗಿ ಸಿದ್ದರಾಮಯ್ಯ ಮಾಡುತ್ತಲೆ ಇದ್ದಾರೆ ಎಂದು ಸಂಸದ ಪ್ರತಾಪ್ ಹರಿಹಾಯ್ದರು.
ಬೃಹತ್ ಮೈಸೂರು ಪಾಲಿಕೆ ಮಾಡಬೇಕು ಎಂಬ ಫೈಲ್ ಪಾಲಿಕೆ ಕೌನ್ಸಿಲ್ ಮುಂದೆ ಇದೆ. ಕೌನ್ಸಿಲ್ ಸಭೆಯನ್ನು ಸರಕಾರ ದಿಢೀರ್ ರದ್ದುಗೊಳಿಸಿದೆ. ಕಾಂಗ್ರೆಸ್ ಬೃಹತ್ ಮೈಸೂರು ಪಾಲಿಕೆಗೆ ವಿರೋಧವಿದೆ. ಕಾಂಗ್ರೆಸ್ ಗೆ ದಲಿತರು ಕೇರಿಯಲ್ಲೇ ಇರಬೇಕು. ಮುಸಲ್ಮಾನರು ಮೊಹಲ್ಲಾದಲ್ಲೇ ಇರಬೇಕು.
ನೀವು ಮಾತ್ರ ಸದಾಶಿವನಗರದಲ್ಲಿ ಇರಬೇಕಾ? ಮೈಸೂರು ಅಭಿವೃದ್ಧಿ ಮಾಡಬಾರದಾ? ಮೈಸೂರು ಅಭಿವೃದ್ಧಿ ಆಗಬಾರದಾ? ನೀವಂತೂ ಮೈಸೂರು ಅಭಿವೃದ್ಧಿ ಮಾಡಲಿಲ್ಲ. ನಮಗಾದರೂ ಅಭಿವೃದ್ಧಿ ಮಾಡಲು ಬಿಡಿ. ಅಭಿವೃದ್ಧಿಗೆ ಕಾಂಗ್ರೆಸ್ ವಿರೋಧವಿದೆ. ಭಾಗ್ಯಗಳ ಕೊಟ್ಟಿದಾರೆ. ಇನ್ನೂ ಓಸಿ ಪ್ಯಾಕ್ ಕೊಡುವುದು ಮಾತ್ರ ಬಾಕಿ ಇದೆ. ಅದನ್ನು ಕೊಟ್ಟು ಜನರನ್ನು ಅಲ್ಲೇ ಕೂರಿಸಿ. ನೀವು ಮಾತ್ರ ಬೆಂಗಳೂರಿನಲ್ಲಿ ಅರಾಮಾಗಿ ಇರಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…