ಮೈಸೂರು : ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.
ಇದನ್ನು ಓದಿ: ಹುಲಿ ಓಡಾಡುವ ನಕಲಿ (AI) ವಿಡಿಯೋ : ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ
ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ:
ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ:
ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.
ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ:
ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…