ಮೈಸೂರು

ಯುವ ನಿಧಿ ಯೋಜನೆ ನೋಂದಣಿ ಬಗ್ಗೆ ಅಭ್ಯರ್ಥಿಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಂದು(ಆ.14) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವನಿಧಿ ಯೋಜನೆಯ ನೋಂದಣಿ ಕುರಿತು ಯೋಜನೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2023 ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಿ, ಜಿಲ್ಲೆಯ ಅರ್ಹ ಪದವಿ, ಡಿಪ್ಲೋಮಾ, ಪದವೀಧರರು ಸರ್ಕಾರದ ಯೋಜನೆಯ ನೆರವು ಪಡೆಯುವಂತೆ ತಿಳಿಸಿದರು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಹಂತದಲ್ಲಿ ಅಭ್ಯರ್ಥಿಗಳ ಹಾಜರಿ ಕಡ್ಡಾಯವಲ್ಲವಾಗಿದ್ದು, ಅಭ್ಯರ್ಥಿಗಳು ನೀಡಿರುವ ದಾಖಲೆಯ ನೈಜತೆಯನ್ನು ಆಧರಿಸಿ ಅರ್ಜಿಯನ್ನು ತಿರಸ್ಕೃತ ಅಥವಾ ಅನುಮೋದನೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ ಎಂ ರಾಣಿಯವರು ಮಾತನಾಡಿ, ಇವರೆಗೂ ಮೈಸೂರು ಜಿಲ್ಲೆಯಲ್ಲಿ 6516 ಅಭ್ಯರ್ಥಿಗಳು ಇವನಿಗೆ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, 4279 ಅಭ್ಯರ್ಥಿಗಳ ಅರ್ಜಿಯನ್ನು ಅನುಮೋದಿಸಲಾಗಿರುತ್ತದೆ. ಇನ್ನುಳಿದ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಚಾಲ್ತಿಯಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ನೇ ತಾರೀಕಿನಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರನಗದು ವರ್ಗಾವಣೆಯಾಗುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

3 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

3 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

3 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

4 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

4 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

4 hours ago