ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಅವರು ತಮಗೆ ಬೇಕಾದ ರೀತಿಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮೈಸೂರಿನಲ್ಲಿ ಆಗ್ರಹಿಸಿದ್ದಾರೆ.
ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪ್ರಮುಖವಾಗಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಡಿಸಿಎಂ ಸ್ಥಾನದಿಂದ ಅಮಾನತುಗೊಳಿಸಬೇಕು. ಪೆನ್‌ಡ್ರೈವ್ ಪ್ರಕರಣದಲ್ಲಿ ಕೇವಲ ಪ್ರಜ್ವಲ್ ಮಾತ್ರವಲ್ಲ. ಪೆನ್‌ಡ್ರೈವ್ ಹಂಚಿದವರ ಮೇಲೂ ಪ್ರಕರಣ ದಾಖಲಿಸಬೇಕು. ಹಾಗೆಯೇ ದೇವರಾಜಗೌಡ ಹಾಗೂ ಡಿಕೆ ಶಿವಕುಮಾರ್ ಅವರ ಆಡಿಯೋ ಬಗ್ಗೆ ಕೂಡಾ ತನಿಖೆ ನಡೆಯಬೇಕು ಎಂದರು.
ಇನ್ನು ಈ ಪ್ರಕರಣದಲ್ಲಿ ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಅಡಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜತೆಗೂಡಿ ಮಾಡಿರುವ ಷಡ್ಯಂತ್ರ ಇದಾಗಿದೆ. ಇವರ ಆಜ್ಞೆಯಂತೆ ಎಸ್‌ಐಟಿ ಕೆಲಸ ಮಾಡುತ್ತಿದೆ. ಇವರಿಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಬೇಕಿಲ್ಲ ದೇವೇಗೌಡ ಕುಟುಂಬ ಮುಗಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ಕಿಡಿಕಾರಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…